Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:5 - ಪರಿಶುದ್ದ ಬೈಬಲ್‌

5 ನಂತರ ಯಾಕೋಬನು ಅವರಿಗೆ, “ನಾಹೋರನ ಮೊಮ್ಮಗನಾದ ಲಾಬಾನನು ನಿಮಗೆ ಗೊತ್ತೆ?” ಎಂದು ಕೇಳಿದನು. ಕುರುಬರು, “ನಮಗೆ ಗೊತ್ತು” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ನಾಹೋರನ ಮಗ-ಲಾಬಾನರನ್ನು ಬಲ್ಲಿರಾ?’ ಎಂದು ಕೇಳಿದ್ದಕ್ಕೆ “ಬಲ್ಲೆವು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಅವರನ್ನು - ನಾಹೋರನ ಮಗನಾದ ಲಾಬಾನನನ್ನು ಬಲ್ಲಿರಾ ಎಂದು ಕೇಳಿದ್ದಕ್ಕೆ - ಬಲ್ಲೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕವನು ಅವರಿಗೆ, “ನಾಹೋರನ ಮೊಮ್ಮಗ ಲಾಬಾನನನ್ನು ನೀವು ಬಲ್ಲಿರೋ?” ಎಂದಾಗ. ಅವರು, “ನಾವು ಅವನನ್ನು ಬಲ್ಲೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:5
4 ತಿಳಿವುಗಳ ಹೋಲಿಕೆ  

ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು.


ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು” ಎಂದು ಹೇಳಿದಳು.


ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು