Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:9 - ಪರಿಶುದ್ದ ಬೈಬಲ್‌

9 ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಕೋಬನು ಅವರೊಂದಿಗೆ ಮಾತಾಡುತ್ತ ಇರುವಾಗಲೆ ಕುರಿಗಾಹಿ ರಾಖೇಲಳು ತನ್ನ ತಂದೆಯ ಕುರಿಗಳನ್ನು ಹೊಡೆದುಕೊಂಡು ಅಲ್ಲಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಅವರೊಂದಿಗೆ ಮಾತಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳನ್ನು ಹೊಡಕೊಂಡು ಬಂದಳು; ಆಕೆಯೇ ಅವುಗಳನ್ನು ಮೇಯಿಸುವವಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:9
7 ತಿಳಿವುಗಳ ಹೋಲಿಕೆ  

ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು.


ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.


ಆ ಕುರುಬರು, “ಕುರಿಮಂದೆಗಳೆಲ್ಲ ಒಟ್ಟಿಗೆ ಸೇರುವವರೆಗೆ ನಾವು ಬಾವಿಯ ಮೇಲಿರುವ ಕಲ್ಲನ್ನು ತೆಗೆದು ಕುರಿಗಳಿಗೆ ನೀರು ಕುಡಿಸುವಂತಿಲ್ಲ; ಅವು ಒಟ್ಟಿಗೆ ಕೂಡಿಬಂದಾಗಲೇ ನೀರು ಕುಡಿಸುತ್ತೇವೆ” ಎಂದು ಹೇಳಿದರು.


ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು.


ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು