ಆದಿಕಾಂಡ 3:10 - ಪರಿಶುದ್ದ ಬೈಬಲ್10 ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಎಲ್ಲಿರುತ್ತಿ ಎಂದು ಕೂಗಿ ಕೇಳಲು ಅವನು - ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅಡಗಿಕೊಂಡೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು. ಅಧ್ಯಾಯವನ್ನು ನೋಡಿ |