Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:13 - ಪರಿಶುದ್ದ ಬೈಬಲ್‌

13 ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವದೇವರು ಸ್ತ್ರೀಯನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಸ್ತ್ರೀಯು - ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:13
15 ತಿಳಿವುಗಳ ಹೋಲಿಕೆ  

ಹವ್ವಳು ಸರ್ಪದ ಕುಯುಕ್ತಿಯಿಂದ ಮೋಸಗೊಂಡಂತೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿ ಇರಬೇಕಾದ ಯಥಾರ್ಥತೆಯನ್ನೂ ಪರಿಶುದ್ಧತೆಯನ್ನೂ ಬಿಟ್ಟು ಕೆಟ್ಟುಹೋದೀತೆಂಬ ಭಯ ನನಗಿದೆ.


ಅಲ್ಲದೆ ಸೈತಾನನಿಂದ ವಂಚಿಸಲ್ಪಟ್ಟದ್ದು ಆದಾಮನಲ್ಲ. ಸ್ತ್ರೀಯು ವಂಚನೆಗೆ ಬಲಿಯಾಗಿ ಪಾಪಿಯಾದಳು.


ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.


ಯೋವಾಬನು ರಾಜನ ಬಳಿಗೆ ಬಂದು, “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದರೂ ಅವನನ್ನು ದಂಡಿಸದೆ ಯಾಕೆ ಕಳುಹಿಸಿಬಿಟ್ಟೆ?


ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.


ಸಮುವೇಲನು, “ನೀನು ಮಾಡಿದ್ದೇನು?” ಎಂದು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟುಹೋಗುತ್ತಿರುವುದನ್ನೂ ನೀನು ನಿಯಮಿತಕಾಲದಲ್ಲಿ ಇಲ್ಲಿ ಇಲ್ಲದಿರುವುದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಒಟ್ಟುಗೂಡುತ್ತಿರುವುದನ್ನೂ ನೋಡಿದೆನು.


ಪಾಪವು ಆ ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು.


ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.


ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ?


ಆದರೆ ಸ್ತ್ರೀಯು ಹೆಣ್ಣುಮಗುವಿಗೆ ಜನ್ಮವಿತ್ತರೆ, ಅವಳು ಆಕೆಯ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆ ಎರಡು ವಾರಗಳವರೆಗೆ ಅಶುದ್ಧಳಾಗಿರುವಳು. ಆಕೆಯು ರಕ್ತಸ್ರಾವದಿಂದ ಶುದ್ಧಳಾಗಲು ಅರವತ್ತಾರು ದಿನಗಳು ಹಿಡಿಯುವವು.


ಆಗ ಆ ಪ್ರವಾದಿಯು, “ಆದರೆ ನಾನೂ ನಿನ್ನಂತೆಯೇ ಒಬ್ಬ ಪ್ರವಾದಿ” ಎಂದು ಹೇಳಿದನು. ನಂತರ ವಯಸ್ಸಾದ ಪ್ರವಾದಿಯು ಅವನಿಗೆ “ಯೆಹೋವನಿಂದ ಒಬ್ಬ ದೇವದೂತನು ನನ್ನ ಬಳಿಗೆ ಬಂದಿದ್ದನು. ಆ ದೂತನು ನಿನ್ನನ್ನು ನನ್ನ ಮನೆಗೆ ಕರೆತರಲು ನಿನ್ನೊಂದಿಗೆ ಅನ್ನಪಾನಗಳನ್ನು ತೆಗೆದುಕೊಳ್ಳಲು ನನಗೆ ತಿಳಿಸಿದನು” ಎಂದು ಸುಳ್ಳು ಹೇಳಿದನು.


ತಾನು ಯೆಹೋವನಿಂದ ದೂರ ಓಡಿಹೋಗುತ್ತಿರುವದಾಗಿ ಯೋನನು ಜನರಿಗೆ ತಿಳಿಸಿದನು. ಆಗ ಅವರು ಬಹಳವಾಗಿ ಹೆದರಿದರು. “ನಿನ್ನ ದೇವರಿಗೆ ವಿರುದ್ಧವಾಗಿ ಎಂಥಾ ಭಯಂಕರ ಕೃತ್ಯ ಮಾಡಿರುವೆ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು