ಆದಿಕಾಂಡ 3:15 - ಪರಿಶುದ್ದ ಬೈಬಲ್15 ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.” ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.