ಆದಿಕಾಂಡ 3:17 - ಪರಿಶುದ್ದ ಬೈಬಲ್17 ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ. ಅಧ್ಯಾಯವನ್ನು ನೋಡಿ |