Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:19 - ಪರಿಶುದ್ದ ಬೈಬಲ್‌

19 ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:19
33 ತಿಳಿವುಗಳ ಹೋಲಿಕೆ  

ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ಆಗ ಭೂಮಿಯ ಮೇಲಿರುವ ಎಲ್ಲಾ ಜನರು ಸತ್ತುಹೋಗಿ ಧೂಳಾಗುವರು.


ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.


ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.


ಜನರಿಗೆ ಜನ್ಮನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.


ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಈ ಲೋಕದಲ್ಲಿ ಮನುಷ್ಯರು ಪಡುವ ಪ್ರಯಾಸದಿಂದ ಅವರಿಗೇನು ಲಾಭ?


ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು.


ಆತನು ನಮ್ಮನ್ನು ಸಂಪೂರ್ಣವಾಗಿ ಬಲ್ಲನು. ನಾವು ಮಣ್ಣಿನಿಂದ ನಿರ್ಮಾಣಗೊಂಡದ್ದೂ ಆತನಿಗೆ ತಿಳಿದಿದೆ.


ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ಮನುಷ್ಯನು ತಾಯಿಯ ಗರ್ಭದಿಂದ ಬರಿದಾಗಿ ಈ ಲೋಕಕ್ಕೆ ಬರುವನು; ಸಾಯುವಾಗ ಅದೇ ರೀತಿ ಬರಿದಾಗಿ ಹೋಗುವನು; ತಾನು ಪ್ರಯಾಸಪಟ್ಟು ಸಂಪಾದಿಸಿದವುಗಳಲ್ಲಿ ಒಂದನ್ನೂ ಅವನು ತನ್ನೊಡನೆ ತೆಗೆದುಕೊಂಡು ಹೋಗಲಾರನು.


ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.


ಜ್ಞಾನದ ಮಾರ್ಗವನ್ನು ತೊರೆದವನು ನಾಶನದ ಕಡೆಗೆ ಹೋಗುತ್ತಿರುವನು.


ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.


ಕೊನೆಯಲ್ಲಿ ಅವರಿಬ್ಬರೂ ಧೂಳಿನಲ್ಲಿ ಒಟ್ಟಿಗೆ ಮಲಗಿಕೊಳ್ಳುವರು. ಹುಳಗಳು ಅವರಿಬ್ಬರನ್ನೂ ಮುತ್ತಿಕೊಳ್ಳುವವು.


ನನ್ನ ಚರ್ಮವು ನಾಶವಾದ ಮೇಲೆಯೂ ನಾನು ಈ ದೇಹದಲ್ಲಿ ದೇವರನ್ನು ನೋಡುವೆನು.


“ನಾನು ತಾಯಿಯ ಗರ್ಭದಿಂದ ಜನಿಸಿದಾಗ ಏನೂ ಇಲ್ಲದವನಾಗಿದ್ದೆನು; ಈ ಲೋಕವನ್ನು ಬಿಟ್ಟು ಹೋಗುವಾಗಲೂ ಏನೂ ಇಲ್ಲದವನಾಗಿಯೇ ಹೋಗುವೆನು. ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು. ಆತನ ನಾಮಕ್ಕೆ ಸ್ತೋತ್ರವಾಗಲಿ!” ಎಂದು ಹೇಳಿದನು.


ಮೊದಲನೆಯ ಮನುಷ್ಯನು ಭೂಮಿಯ ಧೂಳಿನಿಂದ ಬಂದನು. ಆದರೆ ಎರಡನೆಯ ಮನುಷ್ಯನು (ಕ್ರಿಸ್ತನು) ಪರಲೋಕದಿಂದ ಬಂದನು.


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ಭೂಮಿಯು ನಿನಗೋಸ್ಕರ ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸುವುದು. ಹೊಲದಲ್ಲಿ ಬೆಳೆಯುವ ಬೆಳೆಯನ್ನು ನೀನು ತಿನ್ನುವೆ.


ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!


ಬಳಿಕ ಜನರು ಕೆಲಸಕಾರ್ಯಗಳಿಗಾಗಿ ಹೊರಟು ಸಾಯಂಕಾಲದವರೆಗೂ ದುಡಿಯುವರು.


ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.


ಹೀಗೆ ಆದಾಮನು ಒಟ್ಟು 930 ವರ್ಷ ಜೀವಿಸಿ ಮರಣಹೊಂದಿದನು.


ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು