ಆದಿಕಾಂಡ 3:6 - ಪರಿಶುದ್ದ ಬೈಬಲ್6 ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು. ಅಧ್ಯಾಯವನ್ನು ನೋಡಿ |
ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.
ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.
ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.