Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 3:8 - ಪರಿಶುದ್ದ ಬೈಬಲ್‌

8 ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತರುವಾಯ ಯೆಹೋವದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಸ್ತ್ರೀಪುರುಷರು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 3:8
20 ತಿಳಿವುಗಳ ಹೋಲಿಕೆ  

ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.


ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.


ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ.


ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.


ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.


ಬೆಂಕಿಯ ಜ್ವಾಲೆಯೊಳಗಿಂದ ದೇವರು ಮಾತನಾಡಿದ್ದನ್ನು ನೀವು ಕೇಳಿದರೂ ಬದುಕಿದ್ದೀರಿ. ಬೇರೆ ಜನರಿಗೆ ಇಂಥಾ ಅನುಭವವಿದೆಯೋ? ಇಲ್ಲ.


ದಟ್ಟವಾದ ಮೋಡಗಳು ಆತನನ್ನು ಮುಚ್ಚಿಕೊಂಡಿವೆ. ಆಕಾಶದ ಮೇಲ್ಗಡೆಯಲ್ಲಿ ನಡೆದಾಡುವ ಆತನು ನಮ್ಮನ್ನು ಕಾಣಲಾರನು’ ಎಂದು ಹೇಳುತ್ತಿರುವೆ.


ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.


ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.


ನಾನು ನಿಮ್ಮೊಂದಿಗೆ ನಡೆಯುತ್ತಾ ನಿಮ್ಮ ದೇವರಾಗಿರುವೆನು ಮತ್ತು ನೀವು ನನ್ನ ಜನರಾಗಿರುವಿರಿ.


ಇಸ್ರೇಲ್ ಪಾಪ ಮಾಡುತ್ತಾ ಇನ್ನೂ ಹೆಚ್ಚಾಗಿ ಎತ್ತರವಾದ ಸ್ಥಳಗಳನ್ನು ಕಟ್ಟಿತು. ಆವೆನ್‌ನಲ್ಲಿರುವ ಎತ್ತರವಾದ ಸ್ಥಳ ನಾಶಮಾಡಲ್ಪಡುವದು. ಅದರ ಮೇಲೆ ಮುಳ್ಳುಗಿಡಗಳೂ ಹಣಜಿಗಳೂ ಬೆಳೆಯುವವು. ಆಗ ಅವರು ಪರ್ವತಗಳಿಗೆ, “ನಮ್ಮನ್ನು ಮುಚ್ಚಿರಿ” ಎಂದೂ ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ” ಎಂದೂ ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು