Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:14 - ಪರಿಶುದ್ದ ಬೈಬಲ್‌

14 ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗೋದಿಯ ಸುಗ್ಗಿ ಕಾಲದಲ್ಲಿ ರೂಬೇನನು ಹೊಲದ ಕಡೆ ಹೊಗುತ್ತಿದ್ದಾಗ ಕಾಮೋದ್ದೀಪಕ ಹಣ್ಣುಗಳನ್ನು ಕಂಡನು. ಅವನ್ನು ತಂದು ತನ್ನ ತಾಯಿ ಲೇಯಳಿಗೆ ಕೊಟ್ಟನು. ರಾಖೇಲಳು ಆಕೆಗೆ, “ನಿನ್ನ ಮಗ ತಂದಿರುವ ಕಾಮೋದ್ದೀಪಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಕ್ಕಾ,” ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗೋದೀ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಫಲಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ - ನಿನ್ನ ಮಗನು ತಂದಿರುವ ಕಾಮಜನಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಮ್ಮಾ ಎಂದು ಕೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ರೂಬೇನನು ಗೋಧಿ ಕೊಯ್ಯುವ ಕಾಲದಲ್ಲಿ ಹೋಗಿ, ಹೊಲದಲ್ಲಿ ದುದಾಯಿ ಫಲಗಳನ್ನು ಕಂಡು, ತಾಯಿ ಲೇಯಳ ಬಳಿಗೆ ಕೆಲವು ಫಲಗಳನ್ನು ತಂದಾಗ, ರಾಹೇಲಳು ಲೇಯಳಿಗೆ, “ನಿನ್ನ ಮಗನು ತಂದ ಫಲಗಳಲ್ಲಿ ಕೆಲವನ್ನು ನನಗೆ ಕೊಡು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:14
5 ತಿಳಿವುಗಳ ಹೋಲಿಕೆ  

ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ. ನನ್ನ ಪ್ರಿಯನೇ, ನಾನು ನಿನಗೋಸ್ಕರ ಉಳಿಸಿದ ರುಚಿಕರವಾದ ಬಗೆಬಗೆಯ ಹೊಸ ಮತ್ತು ಹಳೆ ಹಣ್ಣುಗಳು ನಮ್ಮ ಬಾಗಿಲ ಬಳಿಯಲ್ಲಿವೆ.


ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.)


ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.


ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು