ಆದಿಕಾಂಡ 30:15 - ಪರಿಶುದ್ದ ಬೈಬಲ್15 ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ?” ಎಂದು ಹೇಳಲು ರಾಹೇಲಳು, “ಒಳ್ಳೆಯದು, ನೀನು ನಿನ್ನ ಮಗನು ತಂದ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ಅಪಹರಿಸಿದ್ದು ಸಾಲದೆಂದು ನನ್ನ ಮಗ ತಂದ ಕಾಮೋದ್ದೀಪಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದಿರುವೆಯಾ?” ಎಂದು ಬದಲಿತ್ತಳು. ಆಗ ರಾಖೇಲಳು, “ಸರಿ, ನೀನು ನಿನ್ನ ಮಗನು ತಂದ ಕಾಮೋದ್ದೀಪಕ ಹಣ್ಣುಗಳನ್ನು ನನಗೆ ಕೊಟ್ಟೆಯಾದರೆ ಇಂದಿನ ರಾತ್ರಿ ಅವರು ನಿನ್ನೊಡನೆ ಮಲಗಬಹುದು,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದಕ್ಕೆ ಲೇಯಳು - ನೀನು ನನ್ನ ಗಂಡನನ್ನು ಅಪಹರಿಸಿದ್ದು ಸಾಲದೋ? ನನ್ನ ಮಗನು ತಂದ ಕಾಮಜನಕ ಫಲಗಳನ್ನೂ ತೆಗೆದುಕೊಳ್ಳಬೇಕೆಂದು ಅಪೇಕ್ಷಿಸುತ್ತೀಯಾ ಎಂದು ಹೇಳಲು ರಾಹೇಲಳು - ಒಳ್ಳೇದು, ನೀನು ನಿನ್ನ ಮಗನ ಹಣ್ಣುಗಳನ್ನು ನನಗೆ ಕೊಟ್ಟರೆ ಗಂಡನು ಈ ಹೊತ್ತು ರಾತ್ರಿ ನಿನ್ನಲ್ಲೇ ಇರಲಿ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು. ಅಧ್ಯಾಯವನ್ನು ನೋಡಿ |