ಆದಿಕಾಂಡ 30:16 - ಪರಿಶುದ್ದ ಬೈಬಲ್16 ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಂಜೆ ಯಕೋಬನು ಹೊರಗಡೆಯಿಂದ ಬಂದಾಗ ಲೇಯಳು ಅವನೆದುರಿಗೆ ಹೋಗಿ, “ನೀವು ನನ್ನೊಡನೆ ಕೂಡಬೇಕು. ನಾನು ನನ್ನ ಮಗ ತಂದ ಕಾಮೋದ್ದೀಪಕ ಹಣ್ಣುಗಳನ್ನು ಕೊಟ್ಟು ನಿಮ್ಮನ್ನು ಕೊಂಡುಕೊಂಡಿದ್ದೇನೆ,” ಎಂದಳು. ಅಂದಿನ ರಾತ್ರಿ ಯಕೋಬನು ಆಕೆಯೊಡನೆ ಕೂಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ - ನೀನು ನನ್ನಲ್ಲಿ ಬರಬೇಕು; ನಾನು ನನ್ನ ಮಗನ ಕಾಮಜನಕ ಫಲಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಾಕೋಬನು ಸಾಯಂಕಾಲದಲ್ಲಿ ಹೊಲದಿಂದ ಬಂದಾಗ, ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನ ಬಳಿಗೆ ಬರಬೇಕು. ನನ್ನ ಮಗನು ತಂದ ದುದಾಯಿ ಫಲಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ,” ಎಂದಳು. ಆದ್ದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು. ಅಧ್ಯಾಯವನ್ನು ನೋಡಿ |