Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:18 - ಪರಿಶುದ್ದ ಬೈಬಲ್‌

18 ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಾನು ನನ್ನ ದಾಸಿಯನ್ನು ಗಂಡನಿಗೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಆಕೆ ಆ ಮಗುವಿಗೆ ‘ಇಸ್ಸಾಕಾರ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆಂದು ಹೇಳಿ ಅದಕ್ಕೆ ಇಸ್ಸಾಕಾರೆಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಲೇಯಳು, “ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅವನಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:18
8 ತಿಳಿವುಗಳ ಹೋಲಿಕೆ  

ಇಸ್ಸಾಕಾರ್ ಕುಲದಿಂದ ಇನ್ನೂರು ಮಂದಿ ಜ್ಞಾನಿಗಳು ಬಂದಿದ್ದರು. ಇವರು ಸಮಯೋಚಿತ ಜ್ಞಾನವುಳ್ಳವರಾಗಿದ್ದರು ಮತ್ತು ಇಸ್ರೇಲರಿಗೆ ಯೋಗ್ಯವಾದದ್ದನ್ನು ತಿಳಿದವರಾಗಿದ್ದರು; ಇವರ ಸಂಬಂಧಿಕರೂ ಇವರೊಂದಿಗಿದ್ದರು ಮತ್ತು ಇವರ ಆಜ್ಞೆಗೆ ಒಳಪಟ್ಟವರೂ ಆಗಿದ್ದರು.


ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ಸಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು.


ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್.


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಲೇಯಳು ಮತ್ತೆ ಬಸುರಾಗುವಂತೆ ದೇವರು ಅನುಗ್ರಹಿಸಿದನು. ಆಕೆ ತನ್ನ ಐದನೆಯ ಮಗನನ್ನು ಹೆತ್ತಳು.


ಲೇಯಳು ಮತ್ತೆ ಬಸುರಾಗಿ ಆರನೆಯ ಮಗನನ್ನು ಹೆತ್ತಳು.


ಸಿಮೆಯೋನನ ಕುಲದಿಂದ 12,000 ಲೇವಿಯ ಕುಲದಿಂದ 12,000 ಇಸ್ಸಾಕಾರನ ಕುಲದಿಂದ 12,000


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು