Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:20 - ಪರಿಶುದ್ದ ಬೈಬಲ್‌

20 ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ಜೆಬುಲೂನ್” ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನೆ. ಆದುದರಿಂದ ಅವರು ನನ್ನೊಡನೆಯೇ ವಾಸಿಸುವರು,” ಎಂದು ಹೆಳಿಕೊಂಡು ಆ ಮಗುವಿಗೆ ‘ಜೆಬುಲೂನ್’ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಕೆಯು - ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ನಾನು ನನ್ನ ಗಂಡನಿಗೆ ಆರು ಮಂದಿ ಗಂಡುಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು ಎಂದು ಹೇಳಿ ಅದಕ್ಕೆ ಜೆಬುಲೂನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ, ನನ್ನ ಗಂಡನು ಈಗಲಾದರೂ ನನ್ನನ್ನು ಗೌರವಿಸುವನು,” ಎಂದು ಹೇಳಿ, ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:20
15 ತಿಳಿವುಗಳ ಹೋಲಿಕೆ  

ಆತನು ನಜರೇತಿನಲ್ಲಿ ಇಳಿದುಕೊಳ್ಳದೆ ಹೊರಟುಹೋಗಿ ಗಲಿಲಾಯ ಸರೋವರಕ್ಕೆ ಹತ್ತಿರವಿದ್ದ ಕಪೆರ್ನೌಮ್ ಎಂಬ ಊರಲ್ಲಿ ವಾಸಿಸಿದನು. ಈ ಊರು ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳ ಬಳಿಯಲ್ಲಿದೆ.


“ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”


ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.


ಅವರನ್ನು ಮುನ್ನಡೆಸಿಕೊಂಡು ಹೋಗುವವರಲ್ಲಿ ಮೊದಲನೆಯದಾಗಿ ಬೆನ್ಯಾಮೀನನ ಚಿಕ್ಕ ಕುಲವಿದೆ; ಅದರ ನಂತರ ಯೆಹೂದನ ಮಹಾಕುಲವಿದೆ. ಅದರ ನಂತರ ಜೆಬುಲೂನ್ ಮತ್ತು ನಫ್ತಾಲಿ ಕುಲಗಳ ನಾಯಕರು ಇದ್ದಾರೆ.


“ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.


ಕೆದೆಷ್ ನಗರದಲ್ಲಿ ಬಾರಾಕನು ಜೆಬುಲೂನ್ ಮತ್ತು ನಫ್ತಾಲಿ ಕುಲದವರನ್ನು ಒಟ್ಟಿಗೆ ಸೇರಿಸಿ ಆ ಕುಲಗಳಿಂದ ಹತ್ತು ಸಾವಿರ ಜನರನ್ನು ತನ್ನೊಂದಿಗೆ ಬರುವಂತೆ ಮಾಡಿದನು. ದೆಬೋರಳು ಸಹ ಬಾರಾಕನ ಸಂಗಡ ಹೋದಳು.


ಜೆಬೂಲೂನನ ಮಕ್ಕಳು: ಸೆರೆದ್, ಏಲೋನ್, ಯಹ್ಲೇಲ್.


ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.


ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.


ಲೇಯಳು ಮತ್ತೆ ಬಸುರಾಗಿ ಆರನೆಯ ಮಗನನ್ನು ಹೆತ್ತಳು.


ತರುವಾಯ ಲೇಯಳು ಒಬ್ಬ ಮಗಳನ್ನು ಹೆತ್ತಳು. ಆಕೆ ತನ್ನ ಮಗಳಿಗೆ ದೀನಾ ಎಂದು ಹೆಸರಿಟ್ಟಳು.


ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.


ತಂದೆಯು ತನ್ನ ಮಗಳನ್ನು ಅವನಿಗೆ ಕೊಡಲು ನಿರಾಕರಿಸಿದರೂ ಅವನು ತೆರವನ್ನು ಕೊಡಬೇಕು. ಅವನು ಅವಳಿಗೋಸ್ಕರ ಪೂರ್ಣ ತೆರವನ್ನು ಕೊಡಬೇಕು.


ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.


ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು