ಆದಿಕಾಂಡ 30:23 - ಪರಿಶುದ್ದ ಬೈಬಲ್23-24 ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಕೆಯು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಕೆ ಗರ್ಭಧರಿಸಿ ಒಂದು ಗಂಡು ಮಗುವನ್ನು ಹೆತ್ತಳು. ” ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಕೆಯು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು, “ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾರೆ,” ಎಂದಳು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.