Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:27 - ಪರಿಶುದ್ದ ಬೈಬಲ್‌

27 ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿರುವೆ” ಎಂದು ಹೇಳಲು ಲಾಬಾನನು ಅವನಿಗೆ, “ನನ್ನ ಮೇಲೆ ದಯೆ ಇಟ್ಟು ನನ್ನ ಬಳಿಯಲ್ಲೇ ಇರು. ಯೆಹೋವನು ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಲಾಬಾನನು ಅವನಿಗೆ - ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ಇರು; ಯೆಹೋವನು ನಿನ್ನ ನಿವಿುತ್ತ ನನ್ನನ್ನು ಅಭಿವೃದ್ಧಿಪಡಿಸಿದ್ದಾನೆಂದು ಚೆನ್ನಾಗಿ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:27
25 ತಿಳಿವುಗಳ ಹೋಲಿಕೆ  

ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.


ಆಗ ರೂತಳು, “ನನ್ನ ಸ್ವಾಮೀ, ನೀವು ನನಗೆ ತುಂಬ ದಯೆ ತೋರಿದಿರಿ. ನಾನು ಕೇವಲ ಒಬ್ಬ ದಾಸಿ. ನಾನು ನಿಮ್ಮ ಒಬ್ಬ ದಾಸಿಯ ಸಮಾನಳಲ್ಲದಿದ್ದರೂ ನೀವು ಒಳ್ಳೆಯ ಮಾತುಗಳಿಂದ ನನಗೆ ಕನಿಕರ ತೋರಿದಿರಿ” ಎಂದು ತನ್ನ ಕೃತಜ್ಞತೆಯನ್ನು ಸೂಚಿಸಿದಳು.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು.


ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.


ಆಗ ಜನರು, “ನೀನು ನಮ್ಮ ಜೀವವನ್ನು ಉಳಿಸಿರುವೆ. ನಾವು ಸಂತೋಷದಿಂದ ಫರೋಹನ ಗುಲಾಮರಾಗುತ್ತೇವೆ” ಎಂದು ಹೇಳಿದರು.


ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.


ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.


“ಸ್ವಾಮಿಗಳೇ, ನಿಮ್ಮ ಸೇವಕನಾದ ನನ್ನ ಜೊತೆಯಲ್ಲಿ ಸ್ವಲ್ಪ ಸಮಯವಿರಿ.


ದೇವರು ಅಶ್ಪೆನಜನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.


ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ನಾದಿನಿಯನ್ನೇ ಹದದನಿಗೆ ಪತ್ನಿಯನ್ನಾಗಿ ಕೊಟ್ಟನು. (ರಾಣಿಯಾದ ತಖ್ಪೆನೇಸಳು ಫರೋಹನ ಪತ್ನಿ.)


ನೀನು ಹೀಗೆಯೇ ನನಗೆ ಮಾಡುವುದಾಗಿದ್ದರೆ ಅದಕ್ಕೆ ಬದಲಾಗಿ ನನ್ನನ್ನು ಕೊಂದುಬಿಡು ಎಂದು ಬೇಡಿಕೊಳ್ಳುತ್ತೇನೆ. ಆಗ ನಾನು ಈ ದುರವಸ್ಥೆಗಳಿಂದ ವಿಮುಕ್ತನಾಗುವೆನು” ಎಂದು ಹೇಳಿದನು.


ಶೆಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶೆಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರಮಾಡಿ ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ.


ಯೆಹೋವನು ಹೇಳುವುದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ.


ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು.


ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”


ತರುವಾಯ ಸೌಲನು ಇಷಯನಿಗೆ, “ದಾವೀದನು ಇಲ್ಲಿಯೇ ನನ್ನ ಸೇವೆಯಲ್ಲಿ ಇರಲಿ. ನಾನು ಅವನನ್ನು ಬಹಳ ಪ್ರೀತಿಸುತ್ತೇನೆ” ಎಂಬ ಸುದ್ದಿಯನ್ನು ಹೇಳಿ ಕಳುಹಿಸಿದನು.


ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ? ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಈ ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ?


ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.


ಓಬೇದೆದೋಮನ ಮನೆಯಲ್ಲಿ ಪವಿತ್ರ ಪೆಟ್ಟಿಗೆಯು ಮೂರು ತಿಂಗಳ ಕಾಲ ಇತ್ತು. ಓಬೇದೆದೋಮನನ್ನೂ ಅವನ ಕುಟುಂಬವನ್ನೂ ಯೆಹೋವನು ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು