Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:29 - ಪರಿಶುದ್ದ ಬೈಬಲ್‌

29 ಯಾಕೋಬನು, “ನಾನು ನಿನಗೋಸ್ಕರ ಕಷ್ಟಪಟ್ಟು ಕೆಲಸ ಮಾಡಿರುವುದು ನಿನಗೆ ಗೊತ್ತಿದೆ. ನಾನು ನಿನ್ನ ಕುರಿಮಂದೆಗಳನ್ನು ನೋಡಿಕೊಂಡಿದ್ದರಿಂದ ಅವು ಹೆಚ್ಚಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಯಾಕೋಬನು, “ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಪ್ರಾಣಿಗಳು ಅಭಿವೃದ್ದಿಯಾದುದ್ದನ್ನೂ ನೀನು ಬಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯಕೋಬನು, “ನಾನು ನಿಮಗೆ ಎಷ್ಟು ಸೇವೆ ಮಾಡಿದ್ದೇನೆಂಬುದೂ ನನ್ನ ವಶದಲ್ಲಿದ್ದ ನಿಮ್ಮ ಪಶುಪ್ರಾಣಿಗಳು ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಯಾಕೋಬನು - ನಾನು ನಿನಗೆ ಮಾಡಿದ ಸೇವೆಯನ್ನೂ ನನ್ನ ವಶದಲ್ಲಿದ್ದ ನಿನ್ನ ಪಶುಗಳು ಅಭಿವೃದ್ಧಿಯಾದದ್ದನ್ನೂ ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ಯಾಕೋಬನು ಅವನಿಗೆ, “ನಾನು ನಿನಗೆ ಮಾಡಿದ ಸೇವೆಯನ್ನೂ, ನಿನ್ನ ಪಶುಗಳು ನನ್ನ ಬಳಿಯಲ್ಲಿ ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:29
10 ತಿಳಿವುಗಳ ಹೋಲಿಕೆ  

ನಿಮ್ಮಿಬ್ಬರಿಗೂ ತಿಳಿದಿರುವಂತೆ, ನಾನು ನಿಮ್ಮ ತಂದೆಗಾಗಿ ನನ್ನಿಂದಾದಷ್ಟು ಕಷ್ಟಪಟ್ಟು ದುಡಿದಿದ್ದೇನೆ.


ಸೇವಕರೇ, ನಿಮ್ಮ ಒಡೆಯರ ಅಧಿಕಾರವನ್ನು ಒಪ್ಪಿಕೊಳ್ಳಿರಿ. ಇದನ್ನು ತುಂಬಾ ಗೌರವದಿಂದ ಮಾಡಿರಿ. ಒಳ್ಳೆಯವರಾದ ಮತ್ತು ದಯಾಪರರಾದ ಒಡೆಯರಿಗೆ ನೀವು ವಿಧೇಯರಾಗಿರಬೇಕು ಮತ್ತು ಕೆಟ್ಟವರಾದ ಒಡೆಯರಿಗೂ ವಿಧೇಯರಾಗಿರಬೇಕು.


ನೀವು ಒಳ್ಳೆಯದನ್ನು ಮಾಡುವಾಗ ನಿಮ್ಮನ್ನು ಕುರಿತು ಕೆಟ್ಟಮಾತುಗಳನ್ನು ಆಡಲು ಮೂಢರಿಗೆ ಸಾಧ್ಯವಾಗುವುದಿಲ್ಲ. ದೇವರ ಅಪೇಕ್ಷೆಯೂ ಇದೇ ಆಗಿದೆ.


“ವಿವೇಕಿಯೂ ನಂಬಿಗಸ್ತನೂ ಆದ ಸೇವಕನು ಯಾರು? ಇತರ ಸೇವಕರಿಗೆ ಆಹಾರವನ್ನು ತಕ್ಕ ಸಮಯದಲ್ಲಿ ಕೊಡುವುದಕ್ಕಾಗಿ ಯಜಮಾನನು ಯಾವ ಸೇವಕನ ಮೇಲೆ ಭರವಸೆಯಿಡುತ್ತಾನೋ ಅವನೇ.


ಬಿಲ್ಹಾ ಬಸುರಾಗಿ ಯಾಕೋಬನಿಗೆ ಒಬ್ಬ ಮಗನನ್ನು ಹೆತ್ತಳು.


ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು