Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:3 - ಪರಿಶುದ್ದ ಬೈಬಲ್‌

3 ನಂತರ ರಾಹೇಲಳು, “ನೀನು ನನ್ನ ಸೇವಕಿಯಾದ ಬಿಲ್ಹಾಳನ್ನು ತೆಗೆದುಕೊಳ್ಳಬಹುದು. ಆಕೆಯೊಡನೆ ಮಲಗಿಕೊ; ಆಕೆ ನನಗೋಸ್ಕರ ಒಂದು ಮಗುವನ್ನು ಹೆರುವಳು. ಆಗ ನಾನು ಆಕೆಯ ಮೂಲಕ ತಾಯಿಯಾಗುವೆನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದಕ್ಕೆ ಆಕೆಯು, “ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ, ಅವಳನ್ನು ಸಂಗಮಿಸು, ಅವಳು ಬಸುರಾದರೆ ಆ ಮಗುವನ್ನು ನನ್ನ ಮಡಿಲಲ್ಲಿ ಹಾಕಲಿ. ಆಗ ನನಗೂ ಸಂತಾನವಾಗುವುದು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ರಾಖೇಲಳು, “ನನ್ನ ದಾಸಿ ಬಿಲ್ಹಾ ಇದ್ದಾಳಲ್ಲವೆ? ಅವಳನ್ನು ಕೂಡಿ, ಅವಳು ನನಗಾಗಿ ಒಂದು ಮಗುವನ್ನು ಹೆತ್ತು ನನ್ನ ಮಡಿಲಲ್ಲಿ ಇಡಲಿ; ಆಗ ಅವಳ ಮುಖಾಂತರ ನನಗೆ ಸಂತಾನ ಪ್ರಾಪ್ತಿಯಾಗುವುದು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದಕ್ಕೆ ಆಕೆಯು - ನನ್ನ ದಾಸಿಯಾದ ಬಿಲ್ಹಾ ಇದ್ದಾಳಲ್ಲಾ; ಅವಳನ್ನು ಕೂಡು; ಅವಳು ಬಸುರಾದರೆ ನನ್ನ ತೊಡೆಯ ಮೇಲೆ ಹೆರಿಸುವೆನು; ಹಾಗೆ ನನಗೂ ಸಂತಾನವಾಗುವದು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದಕ್ಕೆ ಆಕೆಯು, “ನನ್ನ ದಾಸಿ ಬಿಲ್ಹಳು ಇದ್ದಾಳೆ, ಅವಳ ಬಳಿಗೆ ಹೋಗು, ಅವಳು ಹೆತ್ತು ನನ್ನ ಮಡಿಲಲ್ಲಿ ಇಡಲಿ. ಅವಳಿಂದ ನನಗೆ ಮಕ್ಕಳಾಗುವರು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:3
6 ತಿಳಿವುಗಳ ಹೋಲಿಕೆ  

ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು.


ತಾಯಿಯು ತನ್ನ ಮಡಿಲಲ್ಲಿ ನನ್ನನ್ನು ಹೊತ್ತುಕೊಂಡದ್ದೇಕೆ? ಆಕೆಯ ಸ್ತನಗಳು ನನಗೆ ಹಾಲು ಕುಡಿಯಕೊಟ್ಟದ್ದೇಕೆ?


ನಗರದ್ವಾರದಲ್ಲಿ ಸೇರಿದ್ದ ಜನರೆಲ್ಲರು ಮತ್ತು ಹಿರಿಯರು ಸಾಕ್ಷಿಗಳಾಗಿದ್ದರು. ಅವರು, “ಈ ಸ್ತ್ರೀಯು ನಿನ್ನ ಮನೆಗೆ ಬರುವಳು. ಯೆಹೋವನು ಅವಳನ್ನು ರಾಹೇಲಳಂತೆಯೂ ಲೇಯಾಳಂತೆಯೂ ಮಾಡಲಿ. ರಾಹೇಲಳು ಮತ್ತು ಲೇಯಾಳು ಇಸ್ರೇಲಿನ ಮನೆಯನ್ನು ಕಟ್ಟಿದರು. ಎಫ್ರಾತಿನಲ್ಲಿ ಪ್ರಭಾವ ಶಾಲಿಯಾಗು! ಬೆತ್ಲೆಹೇಮಿನಲ್ಲಿ ಸುಪ್ರಸಿದ್ಧನಾಗು!


ಲೇಯಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿ ತನ್ನ ಸೇವಕಿಯಾದ ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಳು.


ಇವರೆಲ್ಲರು ಬಿಲ್ಹಳ ಕುಟುಂಬದವರು. (ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ದಾಸಿಯೇ ಬಿಲ್ಹ. ರಾಹೇಲಳು ಈ ದಾಸಿಯನ್ನು ಯಾಕೋಬನಿಗೆ ಕೊಟ್ಟಿದ್ದಳು.) ಈ ಕುಟುಂಬದಲ್ಲಿ ಒಟ್ಟು ಏಳು ಮಂದಿಯಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು