ಆದಿಕಾಂಡ 30:30 - ಪರಿಶುದ್ದ ಬೈಬಲ್30 ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಾನು ಬರುವುದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಇನ್ನು ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದನೆ ಮಾಡಿಕೊಳ್ಳಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾನು ಬರುವುದಕ್ಕೆ ಮೊದಲು ನಿಮಗಿದ್ದ ಕೆಲವು ಈಗ ಬಹಳವಾಗಿ ಹೆಚ್ಚಿವೆ. ನಾನು ಹೋದ ಕಡೆಗಳಲ್ಲೆಲ್ಲ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿದ್ದಾರೆ. ಆದರೆ ನಾನು ನನ್ನ ಸ್ವಂತ ಮನೆತನಕ್ಕಾಗಿ ಸಂಪಾದಿಸುವುದು ಯಾವಾಗ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ಬರುವದಕ್ಕೆ ಮೊದಲು ನಿನಗಿದ್ದದ್ದು ಸ್ವಲ್ಪವೇ; ಈಗ ಬಹಳವಾಗಿ ಹೆಚ್ಚಾಯಿತು. ನಾನು ಕೈಹಾಕಿದ ಎಲ್ಲಾ ಕೆಲಸದಲ್ಲಿಯೂ ಯೆಹೋವನು ನಿನ್ನನ್ನು ಅಭಿವೃದ್ಧಿಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು. ಅಧ್ಯಾಯವನ್ನು ನೋಡಿ |