32 ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ.
32 ಅದೇನೆಂದರೆ, “ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ, ಕುರಿಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ, ಆಡುಗಳಲ್ಲಿ ಚುಕ್ಕೆ ಮತ್ತು ಮಚ್ಚೆಗಳಿರುವುಗಳನ್ನೂ ವಿಂಗಡಿಸುವೆನು. ಅವೇ ನನ್ನ ಸಂಬಳವಾಗಿರಲಿ.
32 ಅದೇನೆಂದರೆ, ಈ ದಿನ ನಾನು ನಿಮ್ಮ ಮಂದೆಗಳಿಗೆ ಹೋಗಿ ವಿಕಾರ ಬಣ್ಣವುಳ್ಳವುಗಳನ್ನೆಲ್ಲ ಅಂದರೆ, ಕುರಿಮರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಮರಿಗಳಲ್ಲಿ ಚುಕ್ಕೆ ಅಥವಾ ಮಚ್ಚೆವುಳ್ಳವುಗಳನ್ನೂ ವಿಂಗಡಿಸುತ್ತೇನೆ. ಅವೇ ನನ್ನ ಸಂಬಳ ಎಂದು ನೀವು ಭಾವಿಸಬೇಕು.
32 ಅದೇನಂದರೆ, ಈ ಹೊತ್ತು ನಾನು ನಿನ್ನ ಹಿಂಡಿನೊಳಗೆ ಹೋಗಿ ವಿಕಾರವರ್ಣವುಳ್ಳವುಗಳನ್ನೆಲ್ಲಾ ಅಂದರೆ ಕುರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಗಳಲ್ಲಿ ಚುಕ್ಕೆ ಅಥವಾ ಮಚ್ಚೆ ಉಳ್ಳವುಗಳನ್ನೂ ವಿಂಗಡಿಸುವೆನು; [ಮುಂದೆ ಅಂಥಾದ್ದು ಹುಟ್ಟಿದರೆ] ಅದೇ ನನ್ನ ಸಂಬಳವೆಂದು ನೀನು ಭಾವಿಸಬೇಕು.
32 ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದು ಹೋಗುವೆನು. ಕುರಿಗಳಲ್ಲಿ ಕಂದುಬಣ್ಣದವುಗಳನ್ನೆಲ್ಲಾ, ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
“ಒಂದು ಸಲ ಲಾಬಾನನು, ‘ಚುಕ್ಕೆಯಿರುವ ಆಡುಕುರಿಗಳನ್ನೆಲ್ಲ ನೀನು ಇಟ್ಟುಕೊಳ್ಳಬಹುದು. ಇದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ ಎಲ್ಲಾ ಆಡುಕುರಿಗಳು ಚುಕ್ಕೆಯಿರುವ ಮರಿಗಳನ್ನು ಈಯ್ದವು. ಆದ್ದರಿಂದ ಅವೆಲ್ಲ ನನ್ನದಾದವು. ಆಗ ಲಾಬಾನನು, ‘ನಾನು ಚುಕ್ಕೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳುವೆ. ನೀನು ಮಚ್ಚೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳಬಹುದು. ಅದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ, ಎಲ್ಲಾ ಆಡುಕುರಿಗಳು ಮಚ್ಚೆಯಿರುವ ಮರಿಗಳನ್ನು ಈಯ್ದವು.
ಲಾಬಾನನು “ಹಾಗಾದರೆ ನಾನು ನಿನಗೇನು ಕೊಡಬೇಕು” ಎಂದು ಕೇಳಿದನು. ಯಾಕೋಬನು, “ನೀನು ನನಗೆ ಏನೂ ಕೊಡಬೇಕಾಗಿಲ್ಲ. (ನಾನು ಕೆಲಸ ಮಾಡಿದ್ದಕ್ಕೆ ನೀನು ಸಂಬಳ ಕೊಟ್ಟರೆ ಸಾಕು.) ಇದೊಂದು ಕಾರ್ಯವನ್ನು ಮಾಡು; ನಾನು ಹೋಗಿ ನಿನ್ನ ಕುರಿಗಳನ್ನು ನೋಡಿಕೊಳ್ಳುವೆ.
ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.