Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:37 - ಪರಿಶುದ್ದ ಬೈಬಲ್‌

37 ಆದ್ದರಿಂದ ಯಾಕೋಬನು ಲಿಬ್ನೆ, ಲೂಜ್ ಮತ್ತು ಅರ್ಮೋನ್ ಎಂಬ ಮರಗಳಿಂದ ಹಸಿರುಕೊಂಬೆಗಳನ್ನು ಕತ್ತರಿಸಿದನು. ಅವುಗಳನ್ನು ಪಟ್ಟಿಪಟ್ಟಿಯಾಗಿ ತೊಗಟೆ ಸುಲಿದು ಅವುಗಳಲ್ಲಿರುವ ಬಿಳುಪುಬಣ್ಣವು ಕಾಣಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಹೀಗಿರುವಲ್ಲಿ ಯಾಕೋಬನು ಚಿನಾರು, ಬಾದಾಮಿ, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹೀಗಿರುವಲ್ಲಿ ಯಕೋಬನು ಚಿನಾರು, ಬಾದಾಮಿ, ಆರ್ಮೋನ್ ಎಂಬ ಮರಗಳಿಂದ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟಿಪಟ್ಟಿಯಾಗಿ ತೊಗಟೆಯನ್ನು ಸುಲಿದು ಅವುಗಳಲ್ಲಿ ಇರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬೀ ಮರಗಳಲ್ಲಿ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು, ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು, ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:37
6 ತಿಳಿವುಗಳ ಹೋಲಿಕೆ  

ದೇವರ ತೋಟದಲ್ಲಿರುವ ದೇವದಾರು ಮರಗಳೂ ಈ ಮರದಷ್ಟು ಎತ್ತರವಾಗಿರಲಿಲ್ಲ. ಈ ಮಹಾ ಮರಕ್ಕಿರುವಷ್ಟು ಕೊಂಬೆಗಳು ಸೈಪ್ರಸ್ ಮರಗಳಿಗೂ ಇಲ್ಲ. ದೇವರ ತೋಟದಲ್ಲಿದ್ದ ಯಾವ ಮರವಾದರೂ ಇದರಷ್ಟು ಅಂದವಾಗಿರಲಿಲ್ಲ.


ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು.


ಯಾಕೋಬನು ಆ ಕೊಂಬೆಗಳನ್ನು ಮಂದೆಗಳ ಎದುರಿಗೆ ನೀರು ಕುಡಿಯುವ ಸ್ಥಳದಲ್ಲಿಟ್ಟನು. ಪ್ರಾಣಿಗಳು ನೀರು ಕುಡಿಯುವುದಕ್ಕೆ ಬಂದಾಗ ಆ ಸ್ಥಳದಲ್ಲಿ ಸಂಗಮ ಮಾಡುತ್ತಿದ್ದವು.


ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.


ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು