ಆದಿಕಾಂಡ 30:39 - ಪರಿಶುದ್ದ ಬೈಬಲ್39 ಮೇಕೆಗಳು ಆ ಕೊಂಬೆಗಳ ಎದುರಿನಲ್ಲಿ ಸಂಗಮ ಮಾಡಿದಾಗ, ಅವುಗಳಲ್ಲಿ ಹುಟ್ಟಿದ ಮರಿಗಳೆಲ್ಲ ಚುಕ್ಕೆಮಚ್ಚೆಗಳಿಂದಲೂ ಕಪ್ಪು ಬಣ್ಣದಿಂದಲೂ ಕೂಡಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವು ಆ ಕೋಲುಗಳನ್ನು ನೋಡುತ್ತಾ ಸಂಗಮ ಮಾಡಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವು ಕೋಲುಗಳನ್ನು ನೋಡುತ್ತಾ ಸಂಗಮಮಾಡಿದ್ದರಿಂದ ರೇಖೆ ಚುಕ್ಕೆ ಮಚ್ಚೆಗಳುಳ್ಳ ಮರಿಗಳನ್ನು ಈದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಮಂದೆಗಳು ಆ ಕೋಲುಗಳನ್ನು ನೋಡಿ, ಸಂಗಮ ಮಾಡಿದ್ದರಿಂದ, ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು. ಅಧ್ಯಾಯವನ್ನು ನೋಡಿ |
“ಒಂದು ಸಲ ಲಾಬಾನನು, ‘ಚುಕ್ಕೆಯಿರುವ ಆಡುಕುರಿಗಳನ್ನೆಲ್ಲ ನೀನು ಇಟ್ಟುಕೊಳ್ಳಬಹುದು. ಇದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ ಎಲ್ಲಾ ಆಡುಕುರಿಗಳು ಚುಕ್ಕೆಯಿರುವ ಮರಿಗಳನ್ನು ಈಯ್ದವು. ಆದ್ದರಿಂದ ಅವೆಲ್ಲ ನನ್ನದಾದವು. ಆಗ ಲಾಬಾನನು, ‘ನಾನು ಚುಕ್ಕೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳುವೆ. ನೀನು ಮಚ್ಚೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳಬಹುದು. ಅದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ, ಎಲ್ಲಾ ಆಡುಕುರಿಗಳು ಮಚ್ಚೆಯಿರುವ ಮರಿಗಳನ್ನು ಈಯ್ದವು.