Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 30:5 - ಪರಿಶುದ್ದ ಬೈಬಲ್‌

5 ಬಿಲ್ಹಾ ಬಸುರಾಗಿ ಯಾಕೋಬನಿಗೆ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬನು ಅವಳನ್ನು ಸಂಗಮಿಸಲು ಬಿಲ್ಹಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಬಿಲ್ಹಾಳನ್ನು ಕೂಡಲು ಅವಳು ಗರ್ಭಿಣಿಯಾಗಿ ಒಂದು ಗಂಡು ಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಅವಳನ್ನು ಕೂಡಲು ಬಿಲ್ಹಳು ಗರ್ಭಿಣಿಯಾಗಿ ಗಂಡುಮಗುವನ್ನು ಹೆರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬಿಲ್ಹಳು ಗರ್ಭಿಣಿಯಾಗಿ, ಯಾಕೋಬನಿಗೆ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 30:5
11 ತಿಳಿವುಗಳ ಹೋಲಿಕೆ  

“ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಆ ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಆ ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಈ ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.


ಅಂತೆಯೇ ರಾಹೇಲಳು ಬಿಲ್ಹಾಳನ್ನು ತನ್ನ ಗಂಡನಾದ ಯಾಕೋಬನಿಗೆ ಕೊಟ್ಟಳು. ಯಾಕೋಬನು ಬಿಲ್ಹಾಳನ್ನು ಕೂಡಿದನು.


ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು.


ಬಿಲ್ಹಳು ರಾಹೇಲಳ ದಾಸಿ. ಬಿಲ್ಹಳ ಗಂಡುಮಕ್ಕಳು: ದಾನ್ ಮತ್ತು ನಫ್ತಾಲಿ.


ಇವರೆಲ್ಲರು ಬಿಲ್ಹಳ ಕುಟುಂಬದವರು. (ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟ ದಾಸಿಯೇ ಬಿಲ್ಹ. ರಾಹೇಲಳು ಈ ದಾಸಿಯನ್ನು ಯಾಕೋಬನಿಗೆ ಕೊಟ್ಟಿದ್ದಳು.) ಈ ಕುಟುಂಬದಲ್ಲಿ ಒಟ್ಟು ಏಳು ಮಂದಿಯಿದ್ದರು.


ಯಾಕೋಬನು, “ನಾನು ನಿನಗೋಸ್ಕರ ಕಷ್ಟಪಟ್ಟು ಕೆಲಸ ಮಾಡಿರುವುದು ನಿನಗೆ ಗೊತ್ತಿದೆ. ನಾನು ನಿನ್ನ ಕುರಿಮಂದೆಗಳನ್ನು ನೋಡಿಕೊಂಡಿದ್ದರಿಂದ ಅವು ಹೆಚ್ಚಾಗಿವೆ.


ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.


ನಿಮ್ಮೊಡನಿದ್ದು ನಿಮಗೆ ಸಹಾಯಮಾಡುವ ಪುರುಷರು ಯಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್.


ದಾನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ಇಸ್ರೇಲನ ಗಂಡುಮಕ್ಕಳು ಯಾರೆಂದರೆ: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,


ಅಬ್ರಹಾಮನು ಇಸಾಕನ ತಂದೆ. ಇಸಾಕನು ಯಾಕೋಬನ ತಂದೆ. ಯಾಕೋಬನು ಯೆಹೂದ ಮತ್ತು ಅವನ ಸಹೋದರರ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು