Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:10 - ಪರಿಶುದ್ದ ಬೈಬಲ್‌

10 “ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಕುರಿಗಳು ಗರ್ಭಧರಿಸುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳೊಂದಿಗೆ ಸಂಗಮಿಸಿದ ಆಡುಗಳೆಲ್ಲವೂ ರೇಖೆ, ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಆಡುಕುರಿಗಳು ಸಂಗಮ ಮಾಡುವ ಕಾಲದಲ್ಲಿ ನಾನೊಂದು ಕನಸನ್ನು ಕಂಡೆ. ಅದರಲ್ಲಿ ಕಣ್ಣೆತ್ತಿ ನೋಡುತ್ತಿದ್ದ ನನಗೆ ಮೇಕೆಗಳ ಮೇಲೆ ಹಾರಿದ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿಯೆ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕುರಿಗಳು ಸಂಗಮಮಾಡುವ ಕಾಲದಲ್ಲಿ ನಾನು ಕನಸಿನಲ್ಲಿ ಕಣ್ಣೆತ್ತಿ ನೋಡಿದಾಗ ಕುರಿಗಳ ಮೇಲೆ ಹಾರಿದ ಟಗರುಗಳೆಲ್ಲವೂ ರೇಖೆ ಚುಕ್ಕೆ ಮಚ್ಚೆಗಳುಳ್ಳವುಗಳಾಗಿ ಕಾಣಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಇದಲ್ಲದೆ ಕುರಿಗಳು ಸಂಗಮ ಮಾಡುವಾಗ, ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ, ಕುರಿಗಳ ಮೇಲೆ ಏರುವ ಟಗರುಗಳು ಚುಕ್ಕೆ, ಮಚ್ಚೆ, ರೇಖೆಗಳುಳ್ಳವುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:10
11 ತಿಳಿವುಗಳ ಹೋಲಿಕೆ  

ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


“ಒಬ್ಬ ಪ್ರವಾದಿಯಾಗಲಿ ಕನಸಿನ ಅರ್ಥ ಹೇಳುವವನಾಗಲಿ ನಿಮ್ಮ ಬಳಿಗೆ ಬಂದು ನಿಮಗೊಂದು ಸೂಚಕಕಾರ್ಯವನ್ನಾಗಲಿ ಅದ್ಭುತಕಾರ್ಯವನ್ನಾಗಲಿ ಮಾಡಿತೋರಿಸುತ್ತೇನೆ ಎಂದು ಹೇಳಿದರೂ ಹೇಳಬಹುದು.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ಮೇಕೆಗಳು ಆ ಕೊಂಬೆಗಳ ಎದುರಿನಲ್ಲಿ ಸಂಗಮ ಮಾಡಿದಾಗ, ಅವುಗಳಲ್ಲಿ ಹುಟ್ಟಿದ ಮರಿಗಳೆಲ್ಲ ಚುಕ್ಕೆಮಚ್ಚೆಗಳಿಂದಲೂ ಕಪ್ಪು ಬಣ್ಣದಿಂದಲೂ ಕೂಡಿದ್ದವು.


ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.


ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.


ಹೀಗೆ ದೇವರು ನಿಮ್ಮ ತಂದೆಯಿಂದ ಆಡುಕುರಿಗಳನ್ನು ತೆಗೆದುಕೊಂಡು ಅವುಗಳನ್ನು ನನಗೆ ಕೊಟ್ಟನು.


ದೇವದೂತನು ಕನಸಿನಲ್ಲಿ ನನ್ನ ಚೊತೆ ಮಾತಾಡಿ ‘ಯಾಕೋಬನೇ’ ಎಂದು ಕರೆದನು. “ನಾನು ‘ಇಗೋ ಇದ್ದೇನೆ’ ಎಂದು ಉತ್ತರಿಸಿದೆ.


“ದೇವದೂತನು ನನಗೆ, ‘ನೋಡು ಚುಕ್ಕೆಮಚ್ಚೆಗಳಿರುವ ಆಡುಕುರಿಗಳು ಮಾತ್ರ ಸಂಗಮಿಸುತ್ತವೆ. ಹೀಗಾಗುವಂತೆ ನಾನೇ ಮಾಡಿರುವೆನು. ನಿನಗೆ ಲಾಬಾನನು ಮಾಡುತ್ತಿರುವ ಅನ್ಯಾಯಗಳನ್ನೆಲ್ಲ ನಾನು ನೋಡಿರುವೆನು. ಆದ್ದರಿಂದ ಹುಟ್ಟುವ ಮರಿಗಳೆಲ್ಲ ನಿನ್ನದಾಗುವಂತೆ ನಾನೇ ಮಾಡಿದ್ದೇನೆ.


ಒಂದು ದಿನ ಯೋಸೇಫನು ವಿಶೇಷವಾದ ಕನಸನ್ನು ಕಂಡನು. ಯೋಸೇಫನು ಈ ಕನಸನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು