Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:15 - ಪರಿಶುದ್ದ ಬೈಬಲ್‌

15 ಅವನು ನಮ್ಮನ್ನು ಅನ್ಯರಂತೆ ಕಂಡನು; ಅವನು ನಮ್ಮನ್ನು ನಿನಗೆ ಮಾರಿದ್ದಾನೆ; ನಮ್ಮ ಐಶ್ವರ್ಯವನ್ನೆಲ್ಲ ಅವನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ಹಣವನ್ನು ತಾನೇ ನುಂಗಿಬಿಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರು ನಮ್ಮನ್ನು ಅನ್ಯರೆಂದೇ ಎಣಿಸುತ್ತಾರೆ; ನಮ್ಮನ್ನು ಮಾರಿ, ನಮ್ಮ ಮೂಲಕ ದೊರಕಿದ ಹಣವನ್ನು ಅವರೇ ನುಂಗಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ದ್ರವ್ಯವನ್ನು ತಾನೇ ನುಂಗಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:15
9 ತಿಳಿವುಗಳ ಹೋಲಿಕೆ  

“ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.


ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.


ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.


ಆ ರಾತ್ರಿ ಲಾಬಾನನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕಳುಹಿಸಿದನು. ಯಾಕೋಬನು ಆಕೆಯನ್ನು ಕೂಡಿದನು.


ರಾಹೇಲಳು ಮತ್ತು ಲೇಯಳು ಯಾಕೋಬನಿಗೆ, “ನಮ್ಮ ತಂದೆ ಸಾಯುವಾಗ ನಮಗೆ ಕೊಡಲು ಅವನಲ್ಲಿ ಏನೂ ಇಲ್ಲ.


ದೇವರು ಈ ಐಶ್ವರ್ಯವನ್ನೆಲ್ಲ ನಮ್ಮ ತಂದೆಯಿಂದ ತೆಗೆದುಕೊಂಡಿದ್ದಾನೆ. ಈಗ ಅದು ನಮಗೂ ನಮ್ಮ ಮಕ್ಕಳಿಗೂ ಸೇರಿದೆ. ಆದ್ದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು