Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:23 - ಪರಿಶುದ್ದ ಬೈಬಲ್‌

23 ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ತನ್ನ ಬಂಧುಗಳನ್ನು ಕೂಡಿಸಿಕೊಂಡು, ಏಳು ದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಕೂಡಲೆ ತನ್ನ ಬಂಧುಬಳಗದವರನ್ನು ಕರೆದುಕೊಂಡು, ಏಳು ದಿನ ಪ್ರಯಾಣಮಾಡಿ ಯಕೋಬನನ್ನು ಹಿಂದಟ್ಟಿ ಗಿಲ್ಯಾದ್ ಗುಡ್ಡಗಾಡಿನಲ್ಲಿ ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ತನ್ನ ಬಂಧು ಜನರನ್ನು ಕೂಡಿಕೊಂಡು, ಏಳುದಿನ ಪ್ರಯಾಣಮಾಡಿ ಯಾಕೋಬನನ್ನು ಹಿಂದಟ್ಟಿ, ಗಿಲ್ಯಾದ್ ಬೆಟ್ಟದ ಸೀಮೆಯಲ್ಲಿ ಅವನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:23
6 ತಿಳಿವುಗಳ ಹೋಲಿಕೆ  

ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು.


ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ


ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.


ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.


ಯಾಕೋಬನು ಓಡಿಹೋದದ್ದು ಮೂರು ದಿನಗಳಾದ ಮೇಲೆ ಲಾಬಾನನಿಗೆ ತಿಳಿಯಿತು.


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು