Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:24 - ಪರಿಶುದ್ದ ಬೈಬಲ್‌

24 ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು - ನೋಡಿಕೋ, ನೀನು ಯಾಕೋಬನಿಗೆ ಏನೂ ಅನ್ನಬೇಡ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:24
28 ತಿಳಿವುಗಳ ಹೋಲಿಕೆ  

ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.


ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು.


ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.


ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.


ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು. ಅಬ್ಷಾಲೋಮನು ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಏನನ್ನೂ ಅಮ್ನೋನನಿಗೆ ಹೇಳಲಿಲ್ಲ. ಅಮ್ನೋನನು ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅಬ್ಷಾಲೋಮನು ಅಮ್ನೋನನನ್ನು ದ್ವೇಷಿಸಿದನು.


ಯೋಸೇಫನು ಹೀಗೆ ಆಲೋಚಿಸಿಕೊಂಡನಂತರ, ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡನು. ಆ ದೂತನು, “ದಾವೀದನ ಮಗನಾದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯಾಗಿ ಸ್ವೀಕರಿಸಲು ಭಯಪಡಬೇಡ. ಆಕೆ ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಾಳೆ.


“ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲನು ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು.


ಹೌದು, ನೀನು ನನ್ನ ವಿಷಯದಲ್ಲಿ ಕೋಪಗೊಂಡಿರುವೆ. ಗರ್ವದಿಂದ ತುಂಬಿದ ನಿನ್ನ ಪರಿಹಾಸ್ಯದ ಮಾತುಗಳನ್ನು ನಾನು ಕೇಳಿದ್ದೇನೆ. ನಾನು ನಿನ್ನ ಮೂಗಿಗೆ ಕೊಕ್ಕೆ ಸಿಕ್ಕಿಸಿ, ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ, ನೀನು ಎಲ್ಲಿಂದ ಬಂದಿದ್ದೆಯೋ ಅಲ್ಲಿಗೆ ನಿನ್ನನ್ನು ಹಿಂತಿರುಗಿಸುತ್ತೇನೆ.”


ಅವನ ದೇಹವು ಬಾಲ್ಯದಂತೆ ಕೋಮಲವಾಗುವುದು; ಯೌವನಪ್ರಾಯದಂತೆ ದೃಢಕಾಯವಾಗುವುದು.


ಸೊಲೊಮೋನನು ಗಿಬ್ಯೋನಿನಲ್ಲಿದ್ದಾಗ, ಯೆಹೋವನು ರಾತ್ರಿ ಕನಸಿನಲ್ಲಿ ಅವನಿಗೆ ದರ್ಶನವನ್ನು ನೀಡಿ, “ನೀನು ಏನುಬೇಕಾದರೂ ಕೇಳು. ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.


ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.


ಬಳಿಕ ಯೆಹೋವನ ದೂತನು ಮತ್ತೆ ಮುಂದೆ ಹೋಗಿ ಕತ್ತೆಯು ಎಡಕ್ಕಾಗಲಿ ಬಲಕ್ಕಾಗಲಿ ಹೊರಳಲು ಸಾಧ್ಯವಿಲ್ಲದಷ್ಟು ಇನ್ನೂ ಕಿರಿದಾದ ಸ್ಥಳದಲ್ಲಿ ನಿಂತುಕೊಂಡನು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಈ ಜನರು ನಿನ್ನನ್ನು ತಮ್ಮೊಡನೆ ಬರಬೇಕೆಂದು ಆಹ್ವಾನಿಸಲು ಬಂದಿದ್ದಾರೆ. ಆದ್ದರಿಂದ ನೀನು ಅವರೊಂದಿಗೆ ಹೋಗಬಹುದು. ಆದರೆ ನಾನು ಹೇಳುವುದನ್ನು ಮಾತ್ರ ಮಾಡು” ಎಂದು ಹೇಳಿದನು.


ದೇವರು, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ, ನಾನು ಅವನಿಗೆ ನನ್ನನ್ನು ದರ್ಶನದಲ್ಲಿ ಗೊತ್ತುಪಡಿಸಿಕೊಳ್ಳುವೆನು ಅಥವಾ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.


ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು.


“ಪ್ರಾಣಿಗಳು ಸಂಗಮಿಸುವಾಗ ನನಗೆ ಒಂದು ಕನಸಾಯಿತು. ಸಂಗಮಿಸುತ್ತಿದ್ದ ಹೋತಗಳೆಲ್ಲ ಚುಕ್ಕೆಗಳನ್ನು ಮತ್ತು ಮಚ್ಚೆಗಳನ್ನು ಹೊಂದಿದ್ದವು.


ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.


ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು.


ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.


ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.


ದೇವದೂತನು ಕನಸಿನಲ್ಲಿ ನನ್ನ ಚೊತೆ ಮಾತಾಡಿ ‘ಯಾಕೋಬನೇ’ ಎಂದು ಕರೆದನು. “ನಾನು ‘ಇಗೋ ಇದ್ದೇನೆ’ ಎಂದು ಉತ್ತರಿಸಿದೆ.


ಆದ್ದರಿಂದ ಲಾಬಾನನು ತನ್ನ ಜನರನ್ನು ಕರೆದುಕೊಂಡು ಯಾಕೋಬನನ್ನು ಬೆನ್ನಟ್ಟಿದನು. ಏಳು ದಿನಗಳಾದ ಮೇಲೆ ಲಾಬಾನನು ಯಾಕೋಬನನ್ನು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಕಂಡನು.


ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು