ಆದಿಕಾಂಡ 31:25 - ಪರಿಶುದ್ದ ಬೈಬಲ್25 ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಲಾಬಾನನು, ಯಕೋಬನನ್ನು ಎದುರುಗೊಂಡಾಗ ಯಕೋಬನು ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿಕೊಂಡಿದ್ದನು. ಲಾಬಾನನು ಕೂಡ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಲಾಬಾನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಸಿದನು. ಲಾಬಾನನೂ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ತರುವಾಯ ಲಾಬಾನನು ಯಾಕೋಬನನ್ನು ಸಂಧಿಸಿದಾಗ, ಯಾಕೋಬನು ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ಅಲ್ಲಿಯೇ ಗುಡಾರವನ್ನು ಹಾಕಿಸಿದ್ದನು. ಅಧ್ಯಾಯವನ್ನು ನೋಡಿ |