ಆದಿಕಾಂಡ 31:29 - ಪರಿಶುದ್ದ ಬೈಬಲ್29 ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.