Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:3 - ಪರಿಶುದ್ದ ಬೈಬಲ್‌

3 ಯೆಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮತ್ತು ಯೆಹೋವನು ಅವನಿಗೆ - ನಿನ್ನ ತಂದೆತಾತಂದಿರ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು; ನಾನು ನಿನ್ನೊಂದಿಗೆ ಇರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಯಾಕೋಬನಿಗೆ, “ನಿನ್ನ ತಂದೆಗಳ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ನಾನು ನಿನ್ನ ಸಂಗಡ ಇರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:3
26 ತಿಳಿವುಗಳ ಹೋಲಿಕೆ  

“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ನಾನೇ ನಿನ್ನ ಸಂಗಡವಿದ್ದೇನೆ. ಆದ್ದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದ್ದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ನೀತಿಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.


ಆಮೇಲೆ ಅಬೀಮೆಲೆಕನು ಮತ್ತು ಫೀಕೋಲನು ಅಬ್ರಹಾಮನೊಡನೆ ಮಾತಾಡಿದರು. ಫೀಕೋಲನು ಅಬೀಮೆಲೆಕನ ಸೈನ್ಯಾಧಿಕಾರಿಯಾಗಿದ್ದನು. ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಮಾಡುವ ಪ್ರತಿಯೊಂದರಲ್ಲೂ ದೇವರು ನಿನ್ನೊಡನೆ ಇದ್ದಾನೆ.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.


ನಂತರ ಅವರೆಲ್ಲರೂ, ಯಾಕೋಬನ ತಂದೆ ವಾಸಿಸಿದ ಸ್ಥಳವಾದ ಕಾನಾನಿಗೆ ಮರಳಿ ಪ್ರಯಾಣ ಬೆಳೆಸಿದರು. ಯಾಕೋಬನು ಹೊಂದಿದ್ದ ಎಲ್ಲಾ ಆಡುಕುರಿಗಳ ಮಂದೆಗಳು ಅವರ ಮುಂದೆ ನಡೆದವು. ಅವನು ಪದ್ದನ್‌ಅರಾಮಿನಲ್ಲಿದ್ದಾಗ ಹೊಂದಿಕೊಂಡಿದ್ದ ಪ್ರತಿಯೊಂದನ್ನೂ ಅವರು ತೆಗೆದುಕೊಂಡು ಹೋದರು.


ಯೋಸೇಫನು ಹುಟ್ಟಿದ ಮೇಲೆ, ಯಾಕೋಬನು ಲಾಬಾನನಿಗೆ, “ಈಗ ನಾನು ನನ್ನ ಸ್ವಂತ ಮನೆಗೆ ಹೋಗಲು ಅನುಮತಿ ಕೊಡು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.


ಆ ರಾತ್ರಿ ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು. ಭಯಪಡಬೇಡ, ನಾನು ನಿನ್ನ ಸಂಗಡವಿದ್ದೇನೆ. ನಾನು ನಿನ್ನನ್ನು ಆಶೀರ್ವದಿಸುವೆನು. ನಾನು ನಿನ್ನ ಕುಟುಂಬವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಸೇವಕನಾದ ಅಬ್ರಹಾಮನಿಗಾಗಿಯೇ ಇದನ್ನು ಮಾಡುತ್ತೇನೆ” ಎಂದು ಹೇಳಿದನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.


ನೀನು ನಮಗೆ ಬಹು ದುಃಖವನ್ನೂ ಕಷ್ಟಗಳನ್ನೂ ಬರಮಾಡಿದೆ. ಈಗ ನಮ್ಮನ್ನು ಸಂತೋಷಗೊಳಿಸು.


ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.


ಲಾಬಾನನು ಮೊದಲಿನಂತೆ ಸ್ನೇಹದಿಂದ ಇಲ್ಲದಿರುವುದನ್ನು ಸಹ ಯಾಕೋಬನು ಗಮನಿಸಿದನು.


ಆದ್ದರಿಂದ ಯಾಕೋಬನು ರಾಹೇಲಳಿಗೆ ಮತ್ತು ಲೇಯಳಿಗೆ ತನ್ನ ಆಡುಕುರಿಗಳು ಮೇಯುತ್ತಿರುವ ಹೊಲದಲ್ಲಿ ತನ್ನನ್ನು ಭೇಟಿಯಾಗಬೇಕೆಂದು ಹೇಳಿದನು.


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’”


ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು