ಆದಿಕಾಂಡ 31:31 - ಪರಿಶುದ್ದ ಬೈಬಲ್31 ಯಾಕೋಬನು, “ನಾನು ನಿನಗೆ ಹೇಳದೆ ಹೊರಟು ಬಂದೆ. ಯಾಕೆಂದರೆ ನನಗೆ ಭಯವಾಗಿತ್ತು; ನೀನು ನಿನ್ನ ಹೆಣ್ಣುಮಕ್ಕಳನ್ನು ನನ್ನಿಂದ ತೆಗೆದುಕೊಳ್ಳಬಹುದೆಂದು ನಾನು ಭಾವಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅದಕ್ಕೆ ಯಾಕೋಬನು ಲಾಬಾನನಿಗೆ, “ನೀನು ನಿನ್ನ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವಿ ಎಂದು ಭಯಪಟ್ಟು ಹೊರಟು ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದಕ್ಕೆ ಪ್ರತ್ಯುತ್ತರವಾಗಿ ಯಕೋಬನು, “ನೀವು ನಿಮ್ಮ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಕಿತ್ತುಕೊಳ್ಳುವಿರಿ ಎಂದು ಭಯಪಟ್ಟು ಹೀಗೆ ಹೊರಟು ಬಂದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅದಕ್ಕೆ ಯಾಕೋಬನು - ನೀನು ನಿನ್ನ ಹೆಣ್ಣುಮಕ್ಕಳನ್ನು ಬಲಾತ್ಕಾರದಿಂದ ತೆಗೆದುಕೊಳ್ಳುವಿ ಎಂದು ಭಯಪಟ್ಟು [ಹೀಗೆ ಹೊರಟು ಬಂದೆನು]. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅದಕ್ಕೆ ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನಿನ್ನ ಪುತ್ರಿಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವೆ ಎಂದು ಭಯಪಟ್ಟೆನು. ಅಧ್ಯಾಯವನ್ನು ನೋಡಿ |
ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)