ಆದಿಕಾಂಡ 31:33 - ಪರಿಶುದ್ದ ಬೈಬಲ್33 ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಲಾಬಾನನು ಯಕೋಬನ ಗುಡಾರದಲ್ಲೂ, ಲೇಯಳ ಗುಡಾರದಲ್ಲೂ ಹಾಗು ಆ ಇಬ್ಬರು ದಾಸಿಯರ ಗುಡಾರದಲ್ಲೂ ಹುಡುಕಿದನು. ಏನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಖೇಲಳ ಗುಡಾರಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಹುಡುಕಿದರೂ, ಅವುಗಳನ್ನು ಕಾಣಲಿಲ್ಲ. ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು. ಅಧ್ಯಾಯವನ್ನು ನೋಡಿ |
ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)