ಆದಿಕಾಂಡ 31:34 - ಪರಿಶುದ್ದ ಬೈಬಲ್34 ರಾಹೇಲಳು ಆ ವಿಗ್ರಹಗಳನ್ನು ತನ್ನ ಒಂಟೆಯ ಸಬರದೊಳಗಿಟ್ಟು ಅದರ ಮೇಲೆ ಕುಳಿತುಕೊಂಡಿದ್ದಳು. ಲಾಬಾನನು ಇಡೀ ಗುಡಾರವನ್ನು ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು (ತಡಿಯ ಚೀಲದಲ್ಲಿ) ಅವುಗಳ ಮೇಲೆ ಕುಳಿತ್ತಿದ್ದಳು. ಲಾಬಾನನು ಗುಡಾರದಲ್ಲಿದ್ದ ವಸ್ತುಗಳನ್ನೆಲ್ಲಾ ನೋಡಿದರೂ ಅವುಗಳನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ರಾಖೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು, ಅವುಗಳ ಮೇಲೆ ಕುಳಿತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನುಗಳನ್ನೆಲ್ಲ ಮುಟ್ಟಿ ಮುಟ್ಟಿ ನೋಡಿದನು. ವಿಗ್ರಹಗಳು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ರಾಹೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು ಅವುಗಳ ಮೇಲೆ ಕೂತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನನ್ನೆಲ್ಲಾ ಮುಟ್ಟಿಮುಟ್ಟಿ ನೋಡಿದರೂ ಅವುಗಳನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು, ಅದರ ಮೇಲೆ ಕುಳಿತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದರೂ, ಅವನು ಅವುಗಳನ್ನು ಕಾಣಲಿಲ್ಲ. ಅಧ್ಯಾಯವನ್ನು ನೋಡಿ |