ಆದಿಕಾಂಡ 31:37 - ಪರಿಶುದ್ದ ಬೈಬಲ್37 ನಾನು ಹೊಂದಿರುವ ಪ್ರತಿಯೊಂದನ್ನು ನೀನು ಪರೀಕ್ಷಿಸಿ ನೋಡಿದರೂ ನಿನಗೆ ಸೇರಿರುವ ಯಾವುದೂ ನಿನಗೆ ಸಿಕ್ಕಲಿಲ್ಲ. ನಿನಗೆ ಅಂಥದ್ದೇನಾದರೂ ಸಿಕ್ಕಿದರೆ ತೋರಿಸು. ನನ್ನ ಜನರಿಗೆಲ್ಲ ಕಾಣಿಸುವಂತೆ ಅದನ್ನು ಇಲ್ಲಿಡು. ನಮ್ಮಲ್ಲಿ ಯಾರು ಸರಿಯಾದವರೆಂದು ನಮ್ಮ ಜನರೇ ನಿರ್ಣಯಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಾನು ಮಾಡಿದ ದ್ರೋಹವಾದರೂ ಏನು? ನೀವು ನನ್ನ ಸಾಮಾನುಗಳನ್ನೆಲ್ಲಾ ಪರೀಕ್ಷಿಸಿ ನೋಡಿದ್ದಾಯಿತು; ನಿಮ್ಮ ಸೊತ್ತೇನಾದರೂ ಸಿಕ್ಕಿದೆಯೇ? ಸಿಕ್ಕಿದ್ದರೆ ನನ್ನವರ ಮುಂದೆಯೂ ನಿಮ್ಮವರ ಮುಂದೆಯೂ ತಂದಿಡಿ, ನೋಡೋಣ. ಅವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನನ್ನ ಸಾಮಾನನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನವರ ಮುಂದೆಯೂ ನಿನ್ನವರ ಮುಂದೆಯೂ ಅದನ್ನು ತಂದಿಡು ನೋಡೋಣ; ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ. ಅಧ್ಯಾಯವನ್ನು ನೋಡಿ |
ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)