ಆದಿಕಾಂಡ 31:43 - ಪರಿಶುದ್ದ ಬೈಬಲ್43 ಲಾಬಾನನು ಯಾಕೋಬನಿಗೆ, “ಈ ಸ್ತ್ರೀಯರು ನನ್ನ ಮಕ್ಕಳು. ಅವರ ಮಕ್ಕಳು ನನಗೆ ಸೇರಿದವರು; ಈ ಪಶುಗಳು ನನ್ನವು. ನೀನು ಇಲ್ಲಿ ನೋಡುವ ಪ್ರತಿಯೊಂದೂ ನನಗೆ ಸೇರಿದ್ದು. ಆದರೆ ನನ್ನ ಹೆಣ್ಣುಮಕ್ಕಳನ್ನಾಗಲಿ ಅವರ ಮಕ್ಕಳನ್ನಾಗಲಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅದಕ್ಕೆ ಲಾಬಾನನು ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣು ಮುಂದೆ ಇರುವುದೆಲ್ಲವೂ ನನ್ನದೇ. ಹಾಗಾದರೆ ಈ ನನ್ನ ಪುತ್ರಿಯರಿಗೋಸ್ಕರವೂ, ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆಗ ಲಾಬಾನನು ಯಕೋಬನಿಗೆ, “ಈ ಮಹಿಳೆಯರು ನನ್ನ ಪುತ್ರಿಯರು, ಈ ಮಕ್ಕಳು ನನ್ನ ಮೊಮ್ಮಕ್ಕಳು, ಈ ಹಿಂಡುಗಳು ನನಗೆ ಸೇರಿದವು; ನಿನ್ನ ಕಣ್ಮುಂದೆ ಇರುವುದೆಲ್ಲವೂ ನನ್ನವೇ. ಇಂತಿರುವಲ್ಲಿ ಈ ನನ್ನ ಪುತ್ರಿಯರಿಗೇ ಆಗಲಿ, ಇವರು ಹೆತ್ತ ಮಕ್ಕಳಿಗೇ ಆಗಲಿ, ನಾನೀಗ ಏನೂ ಹಾನಿ ಮಾಡಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅದಕ್ಕೆ ಲಾಬಾನನು ಯಾಕೋಬನಿಗೆ - ಈ ಹೆಂಗಸರು ನನ್ನ ಕುಮಾರ್ತೆಗಳಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣಮುಂದೆ ಇರುವದೆಲ್ಲವೂ ನನ್ನದಲ್ಲವೇ. ಆದರೆ ಈ ನನ್ನ ಕುಮಾರ್ತೆಗಳಿಗೋಸ್ಕರವೂ ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡುವೆನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರೇ, ಈ ಮಕ್ಕಳು ನನ್ನ ಮಕ್ಕಳೇ, ಈ ಮಂದೆಯು ನನ್ನ ಮಂದೆಯೇ, ಅಂತು ನೀನು ಕಾಣುವುದೆಲ್ಲಾ ನನ್ನದೇ. ಹಾಗಾದರೆ ನನ್ನ ಪುತ್ರಿಯರಿಗಾಗಲಿ, ಅವರು ಹೆತ್ತ ಮಕ್ಕಳಿಗಾಗಲಿ ನಾನು ಈ ಹೊತ್ತು ಏನು ಮಾಡಲಿ? ಅಧ್ಯಾಯವನ್ನು ನೋಡಿ |