ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.