48 ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.
ಆಗ ಯೆಹೋಶುವನು ಜನರೆಲ್ಲರಿಗೆ, “ನಾವು ಇಂದು ಹೇಳಿದ ಎಲ್ಲವನ್ನು ಜ್ಞಾಪಕದಲ್ಲಿಟ್ಟುಕೊಳ್ಳಲು ಈ ಕಲ್ಲು ನಿಮಗೆ ಸಾಕ್ಷಿಯಾಗಿರುವುದು. ಇಂದು ಯೆಹೋವನು ನಮ್ಮೊಡನೆ ಮಾತನಾಡುತ್ತಿದ್ದಾಗ ಈ ಕಲ್ಲು ಇಲ್ಲಿಯೇ ಇತ್ತು. ಅದಕ್ಕಾಗಿ ಈ ಕಲ್ಲು ಇಂದು ನಡೆದ ಸಂಗತಿಯನ್ನು ನೆನಪಿನಲ್ಲಿಡಲು ನಮಗೆ ಸಹಾಯಕವಾಗುವುದು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿಮುಖರಾದರೆ ಈ ಕಲ್ಲೇ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವುದು” ಎಂದು ಹೇಳಿದನು.
ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.
ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.
ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು.
ತೋಲನ ಮರಣದ ತರುವಾಯ ಯೆಹೋವನು ಮತ್ತೊಬ್ಬ ನ್ಯಾಯಾಧೀಶನನ್ನು ಕಳುಹಿಸಿದನು. ಅವನ ಹೆಸರು ಯಾಯೀರ. ಯಾಯೀರನು ಗಿಲ್ಯಾದ್ ಪ್ರದೇಶದಲ್ಲಿ ವಾಸವಾಗಿದ್ದನು. ಯಾಯೀರನು ಇಪ್ಪತ್ತೆರಡು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.