Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:49 - ಪರಿಶುದ್ದ ಬೈಬಲ್‌

49 ಲಾಬಾನನು, “ನಾವು ಒಬ್ಬರನ್ನೊಬ್ಬರು ಅಗಲಿರುವಾಗ ಯೆಹೋವನೇ ನಮ್ಮನ್ನು ನೋಡಿಕೊಳ್ಳಲಿ” ಎಂದು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಮಿಚ್ಪಾ ಎಂದೂ ಹೆಸರಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಅಂತೆಯೇ ಲಾಬಾನನು, “ನಾವು ಒಬ್ಬರನ್ನೊಬ್ಬರು ಬಿಟ್ಟು ಅಗಲಿದಾಗಲು ಸರ್ವೇಶ್ವರ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರಲಿ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ‘ಮಿಚ್ಪಾ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಅದಲ್ಲದೆ ಅವನು - ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮುಭಯರನ್ನೂ ನೋಡಿಕೊಳ್ಳುತ್ತಾ ಇರುವನು ಎಂದು ಹೇಳಿದ್ದರಿಂದ ಅದಕ್ಕೆ ವಿುಚ್ಪಾ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:49
7 ತಿಳಿವುಗಳ ಹೋಲಿಕೆ  

ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.


ಅಮ್ಮೋನಿಯರು ಯುದ್ಧಕ್ಕೆಂದು ಒಂದೆಡೆ ಸೇರಿದರು. ಅವರು ಗಿಲ್ಯಾದ್‌ನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇಸ್ರೇಲರು ಒಂದೆಡೆ ಸೇರಿಕೊಂಡರು. ಅವರ ಪಾಳೆಯವು ಮಿಚ್ಛೆಯಲ್ಲಿ ಇತ್ತು.


“ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.


ಆಗ ರಾಜನಾದ ಆಸನು ಯೆಹೂದದ ಜನರಿಗೆಲ್ಲ ಒಂದು ಆಜ್ಞೆಯನ್ನು ಮಾಡಿದನು. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಸಹಾಯಮಾಡಬೇಕಾಯಿತು. ಬಾಷನು ರಾಮ ನಗರವನ್ನು ಬಲಪಡಿಸಲೆಂದು ಉಪಯೋಗಿಸುತ್ತಿದ್ದ ಎಲ್ಲಾ ಕಲ್ಲುಗಳನ್ನು ಮತ್ತು ಮರಗಳನ್ನು ಅವರು ರಾಮಕ್ಕೆ ಹೋಗಿ ತೆಗೆದುಕೊಂಡು ಬಂದರು. ಅವರು ಆ ವಸ್ತುಗಳನ್ನು ಬೆನ್ಯಾಮೀನ್ ದೇಶದ ಗೆಬಕ್ಕೆ ಮತ್ತು ಮಿಚ್ಛೆಗಳಿಗೆ ತೆಗೆದುಕೊಂಡು ಹೋದರು. ನಂತರ ರಾಜನಾದ ಆಸನು ಆ ಪಟ್ಟಣಗಳನ್ನು ಮತ್ತಷ್ಟು ಬಲಪಡಿಸಿದನು.


ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೊರಟುಹೋದನು. ಅವರು ಯೆಫ್ತಾಹನನ್ನು ತಮ್ಮ ನಾಯಕನನ್ನಾಗಿಯೂ ಸೇನಾಧಿಪತಿಯನ್ನಾಗಿಯೂ ಮಾಡಿದರು. ಯೆಫ್ತಾಹನು ಮಿಚ್ಛೆ ನಗರದಲ್ಲಿ ಯೆಹೋವನ ಸಮ್ಮುಖದಲ್ಲಿ ತನ್ನ ಎಲ್ಲಾ ಮಾತುಗಳನ್ನು ಮತ್ತೊಮ್ಮೆ ಹೇಳಿದನು.


ನಿನ್ನ ಮತ್ತು ನನ್ನ ಮಧ್ಯೆ ನಡೆದ ಈ ಒಪ್ಪಂದವನ್ನು ಜ್ಞಾಪಿಸಿಕೊ. ಯೆಹೋವನು ಸದಾಕಾಲ ನಮಗೆ ಸಾಕ್ಷಿಯಾಗಿರುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು