ಆದಿಕಾಂಡ 31:50 - ಪರಿಶುದ್ದ ಬೈಬಲ್50 ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಮತ್ತು ಲಾಬಾನನು - ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ನೀನು ನನ್ನ ಪುತ್ರಿಯರನ್ನು ಉಪದ್ರವಪಡಿಸಿದರೆ, ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ಪಡೆದರೆ, ಯಾವ ಮನುಷ್ಯನೂ ವಿಚಾರಿಸಲು ಇಲ್ಲದಿದ್ದರೂ ನನಗೂ ನಿನಗೂ ನಡುವೆ ದೇವರೇ ಈ ಒಪ್ಪಂದಕ್ಕೆ ಸಾಕ್ಷಿ,” ಎಂದನು. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.