ಆದಿಕಾಂಡ 31:52 - ಪರಿಶುದ್ದ ಬೈಬಲ್52 ಈ ಕಲ್ಲುಗಳ ಕುಪ್ಪೆಯೂ ವಿಶೇಷವಾದ ಈ ಕಲ್ಲೂ ನಮ್ಮ ಒಪ್ಪಂದವನ್ನು ನೆನಪುಮಾಡಿಕೊಳ್ಳಲು ನಮ್ಮಿಬ್ಬರಿಗೂ ಸಹಾಯ ಮಾಡುತ್ತವೆ. ನಾನು ನಿನಗೆ ವಿರೋಧವಾಗಿ ಹೋರಾಡುವುದಕ್ಕಾಗಿ ಈ ಕಲ್ಲುಗಳನ್ನು ದಾಟಿ ಬರುವುದಿಲ್ಲ. ನೀನು ನನಗೆ ವಿರೋಧವಾಗಿ ಈ ಕಲ್ಲುಗಳನ್ನು ದಾಟಿ ನನ್ನ ಕಡೆಗೆ ಬರಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಕೇಡು ಮಾಡುವ ಉದ್ದೇಶದಿಂದ ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು. ಹಾಗೆಯೇ ನೀನು ಈ ಕುಪ್ಪೆಯನ್ನಾಗಲಿ ಸ್ತಂಭವನ್ನಾಗಲಿ ದಾಟಿ ನನ್ನ ಬಳಿಗೆ ಬರಕೂಡದು, ಇದಕ್ಕೆ ಈ ಕುಪ್ಪೆ ಹಾಗೂ ಈ ಸ್ತಂಭವೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಕೇಡುಮಾಡುವದಕ್ಕೋಸ್ಕರ ನಾನಂತೂ ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು; ಹಾಗೆಯೇ ನೀನು ಈ ಕುಪ್ಪೆಯನ್ನೂ ಈ ಕಂಬವನ್ನೂ ದಾಟಿ ನನ್ನ ಬಳಿಗೆ ಬರಕೂಡದು; ಇದಕ್ಕೆ ಕುಪ್ಪೆಯೂ ಕಂಬವೂ ಈ ಎರಡೇ ಸಾಕ್ಷಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವುದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವುದಿಲ್ಲವೆಂಬುದಕ್ಕೆ ಈ ಕುಪ್ಪೆಯೂ ಈ ಸ್ತಂಭವೂ ಸಾಕ್ಷಿಯಾಗಿವೆ. ಅಧ್ಯಾಯವನ್ನು ನೋಡಿ |
ನೀವು ಆರಾಧಿಸುವ ದೇವರನ್ನೇ ನಾವೂ ಆರಾಧಿಸುತ್ತೇವೆಂಬುದನ್ನು ನಮ್ಮ ಜನರಿಗೆ ತೋರಿಸಿಕೊಡುವುದೇ ಈ ಯಜ್ಞವೇದಿಕೆಯ ನಿಜವಾದ ಉದ್ದೇಶವಾಗಿದೆ. ನಾವು ಯೆಹೋವನನ್ನು ಆರಾಧಿಸುತ್ತೇವೆ. ನಾವು ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯೆಹೋವನ ಸಾನ್ನಿಧ್ಯದಲ್ಲಿ ಸಮರ್ಪಿಸುತ್ತೇವೆ ಎಂಬುದಕ್ಕೆ ಈ ಯಜ್ಞವೇದಿಕೆಯು ನಿಮಗೂ ನಮಗೂ ಮತ್ತು ನಮ್ಮ ಮುಂದಿನ ಪೀಳಿಗೆಗಳಿಗೂ ಸಾಕ್ಷಿಯಾಗಿರುತ್ತದೆ. ನಾವು ಸಹ ನಿಮ್ಮಂತೆಯೇ ಇಸ್ರೇಲಿನ ಜನರೆಂಬುದನ್ನು ದೊಡ್ಡವರಾದ ಮೇಲೆ ನಿಮ್ಮ ಮಕ್ಕಳಿಗೆ ತಿಳಿದಿರಲಿ ಎಂಬುದು ನಮ್ಮ ಇಚ್ಛೆ.