Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:7 - ಪರಿಶುದ್ದ ಬೈಬಲ್‌

7 ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಚಪಲಚಿತ್ತನಾಗಿ ಹತ್ತುಸಾರಿ ನನ್ನ ಸಂಬಳವನ್ನು ಬದಲಾಯಿಸಿ ವಂಚಿಸಿದರೂ ನನಗೆ ಕೇಡುಮಾಡುವದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:7
19 ತಿಳಿವುಗಳ ಹೋಲಿಕೆ  

ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.


ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.


ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.


ಅನ್ಯಜನರ ಮಧ್ಯೆ ವಾಸಿಸುವ ಯೆಹೂದ್ಯರು ನಮ್ಮ ಬಳಿಗೆ ಬಂದು ಹತ್ತು ಬಾರಿ ನಮಗೆ ತಿಳಿಸಿದರು. “ವೈರಿಗಳು ನಮ್ಮ ಸುತ್ತಮುತ್ತಲೂ ಇದ್ದಾರೆ. ನಾವು ಎತ್ತ ತಿರುಗಿದರೂ ಅಲ್ಲಿ ಅವರಿದ್ದಾರೆ” ಎಂದರು.


ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,


“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.


ಇದುವರೆಗೆ ನೀವು ನನ್ನನ್ನು ಹತ್ತಾರು ಸಲ ಅವಮಾನ ಮಾಡಿರುವಿರಿ. ನೀವು ನಾಚಿಕೆಯಿಲ್ಲದೆ ನನ್ನನ್ನು ಎದುರಿಸುತ್ತೀರಿ!


ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.


ನಿಮಗೆ ರೊಟ್ಟಿ ದಯಪಾಲಿಸುವುದನ್ನು ನಾನು ನಿಲ್ಲಿಸಿದಾಗ, ಹತ್ತು ಮಂದಿ ಸ್ತ್ರೀಯರು ತಮ್ಮಲ್ಲಿರುವ ಎಲ್ಲಾ ರೊಟ್ಟಿಗಳನ್ನು ಒಂದೇ ಒಲೆಯಲ್ಲಿ ಸುಡುವರು. ಅವರು ಪ್ರತಿ ರೊಟ್ಟಿಯ ತುಂಡನ್ನು ತೂಕ ಮಾಡಿ ಹಂಚಿಕೊಳ್ಳುವರು. ನೀವು ತಿಂದರೂ ಹಸಿದವರಾಗಿಯೇ ಇರುವಿರಿ.


ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.


ದೇವರು ನನ್ನ ಮಾರ್ಗವನ್ನು ಮುಚ್ಚಿಬಿಟ್ಟಿದ್ದಾನೆ; ಆದ್ದರಿಂದ ನಾನು ಮುಂದೆ ಹೋಗಲಾರೆ. ಆತನು ನನ್ನ ಮಾರ್ಗವನ್ನು ಕತ್ತಲೆಯಲ್ಲಿ ಮರೆಮಾಡಿದ್ದಾನೆ.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ಮುಂಜಾನೆ ಯಾಕೋಬನು ಎದ್ದು ನೋಡಿದಾಗ ಅವನೊಂದಿಗೆ ಲೇಯಾ ಇದ್ದಳು. ಯಾಕೋಬನು ಲಾಬಾನನಿಗೆ, “ನೀನು ನನಗೆ ಮೋಸ ಮಾಡಿದೆ. ನಾನು ರಾಹೇಲಳನ್ನು ಮದುವೆ ಮಾಡಿಕೊಳ್ಳುವುದಕ್ಕಾಗಿ ತುಂಬಾ ಕಷ್ಟಪಟ್ಟು ಕೆಲಸ ಮಾಡಿದೆ. ನೀನು ನನಗೇಕೆ ಮೋಸ ಮಾಡಿದೆ?” ಎಂದು ಕೇಳಿದನು.


ಹೇಳು, ನಾನು ನಿನಗೆ ಎಷ್ಟು ಸಂಬಳ ಕೊಡಬೇಕು? ನೀನು ಹೇಳಿದಷ್ಟು ಕೊಡುತ್ತೇನೆ” ಎಂದು ಹೇಳಿದನು.


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ಅರಸನು ಮಹತ್ವಪೂರ್ಣವಾದ ವಿಷಯಗಳ ಬಗ್ಗೆ ಅವರನ್ನು ಕೇಳಿದಾಗಲೆಲ್ಲ ಅವರು ಹೆಚ್ಚಿನ ಪ್ರಜ್ಞೆಯನ್ನು, ಬುದ್ಧಿಯನ್ನು ತೋರಿದರು. ಅವರು ಇಡೀ ದೇಶದ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿದ್ದಾರೆಂಬುದನ್ನು ಅರಸನು ಕಂಡುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು