Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:10 - ಪರಿಶುದ್ದ ಬೈಬಲ್‌

10 ನೀನು ನನಗೆ ತುಂಬ ಕರುಣೆ ತೋರಿದೆ. ನೀನು ನನಗೆ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಮೊದಲನೆ ಸಲ ನಾನು ಜೋರ್ಡನ್ ನದಿಯನ್ನು ದಾಟಿ ಪ್ರಯಾಣ ಮಾಡಿದಾಗ, ಕೇವಲ ನನ್ನ ಊರುಗೋಲೇ ಹೊರತು ಬೇರೇನೂ ನನಗಿರಲಿಲ್ಲ. ಆದರೆ ಈಗ ಎರಡು ಗುಂಪುಗಳಿಗೆ ಬೇಕಾದ ವಸ್ತುಗಳನ್ನು ನಾನು ಪಡೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:10
33 ತಿಳಿವುಗಳ ಹೋಲಿಕೆ  

ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ.


ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು.


ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.


ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.”


ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ನೀತಿವಂತರ ಜೀವಿತವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಮುಂಜಾನೆಯ ಬೆಳಕಿನಂತಿರುವುದು.


ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ.


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.


ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು. ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು.


ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು.


ನಿಮ್ಮ ದೇವರಾದ ಯೆಹೋವನನ್ನು ಜ್ಞಾಪಕಮಾಡಿಕೊಳ್ಳಿ. ಇವೆಲ್ಲಾ ಸಂಪಾದಿಸುವುದಕ್ಕೆ ಆತನೇ ನಿಮಗೆ ಶಕ್ತಿ ಕೊಟ್ಟನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ಯೆಹೋವನು ನಿಮಗೆ ಹೀಗೆ ಮಾಡುವುದರ ಉದ್ದೇಶವೇನಾಗಿತ್ತು? ಆತನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು.


ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.


ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’”


ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು. ಅನೇಕ ಸೇವಕರಿದ್ದರು; ಒಂಟೆಗಳಿದ್ದವು ಮತ್ತು ಕತ್ತೆಗಳಿದ್ದವು.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.


ದಾವೀದನು ಮಹನಯಿಮಿಗೆ ಬಂದನು. ಅಬ್ಷಾಲೋಮನು ಮತ್ತು ಇಸ್ರೇಲರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು.


ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ಯೆಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು