Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:18 - ಪರಿಶುದ್ದ ಬೈಬಲ್‌

18 ಆಗ ನೀನು, ‘ಪಶುಗಳು ನಿನ್ನ ಸೇವಕನಾದ ಯಾಕೋಬನವು. ನನ್ನ ಒಡೆಯನಾದ ಏಸಾವನೇ, ಯಾಕೋಬನು ಇವುಗಳನ್ನು ನಿನಗೆ ಉಡುಗೊರೆಯಾಗಿ ಕಳುಹಿಸಿದ್ದಾನೆ. ಅಲ್ಲದೆ ಅವನು ಸಹ ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ತಿಳಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಇವು ನಿಮ್ಮ ದಾಸ ಯಕೋಬನವು; ಒಡೆಯರಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳಿಸಿಕೊಟ್ಟಿದ್ದಾರೆ; ಅವರೂ ನಮ್ಮ ಹಿಂದೆ ಬರುತ್ತಿದ್ದಾರೆ’ ಎಂದು ಉತ್ತರಕೊಡಬೇಕು,” ಎಂಬುದಾಗಿ ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು - ಇವು ನಿಮ್ಮ ಸೇವಕನಾದ ಯಾಕೋಬನವು; ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ; ತಾನೂ ನಮ್ಮ ಹಿಂದೆ ಬರುತ್ತಾನೆ ಎಂದು ಉತ್ತರಕೊಡಬೇಕು ಎಂಬದಾಗಿ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:18
3 ತಿಳಿವುಗಳ ಹೋಲಿಕೆ  

ಯಾಕೋಬನು ಅವರಿಗೆ ಅವರವರ ಕರ್ತವ್ಯಗಳನ್ನು ತಿಳಿಸಿದನು. ಯಾಕೋಬನು ಪಶುಗಳ ಮೊದಲನೆ ಗುಂಪಿನ ಸೇವಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನ ಬಳಿಗೆ ಬಂದು, ‘ಇವು ಯಾರ ಪಶುಗಳು? ನೀನು ಎಲ್ಲಿಗೆ ಹೋಗುತ್ತಿರುವೆ? ನೀನು ಯಾರ ಸೇವಕನು?’ ಎಂದು ಕೇಳುವನು.


ಇದೇ ರೀತಿ ಮಾಡುವಂತೆ ಯಾಕೋಬನು ಎರಡನೆಯ ಸೇವಕನಿಗೆ, ಮೂರನೆಯ ಸೇವಕನಿಗೆ ಮತ್ತು ಉಳಿದೆಲ್ಲಾ ಸೇವಕರಿಗೆ ಆಜ್ಞಾಪಿಸಿದನು. ಅವನು ಅವರಿಗೆ, “ನೀವು ಏಸಾವನನ್ನು ಭೇಟಿಯಾದಾಗ ಇದೇ ರೀತಿ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು