ಆದಿಕಾಂಡ 32:24 - ಪರಿಶುದ್ದ ಬೈಬಲ್24 ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು. ಅಧ್ಯಾಯವನ್ನು ನೋಡಿ |
ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.