ಆದಿಕಾಂಡ 32:26 - ಪರಿಶುದ್ದ ಬೈಬಲ್26 ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.