Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:28 - ಪರಿಶುದ್ದ ಬೈಬಲ್‌

28 ಆಗ ಆ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಈ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:28
24 ತಿಳಿವುಗಳ ಹೋಲಿಕೆ  

“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.


ದೇವರು ಯಾಕೋಬನಿಗೆ, “ನಿನ್ನ ಹೆಸರು ಯಾಕೋಬ. ಆದರೆ ನಾನು ಆ ಹೆಸರನ್ನು ಬದಲಾಯಿಸುವೆನು. ಇನ್ನು ಮುಂದೆ ನೀನು ಯಾಕೋಬನೆಂದು ಕರೆಸಿಕೊಳ್ಳುವುದಿಲ್ಲ. ನಿನ್ನ ಹೊಸ ಹೆಸರು ‘ಇಸ್ರೇಲ್’” ಎಂದು ಹೇಳಿ ಅವನಿಗೆ “ಇಸ್ರೇಲ್” ಎಂದು ಹೆಸರಿಟ್ಟನು.


‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.


ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರ.


ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.


ಯೆಹೋವನ ಚಿತ್ತಕ್ಕನುಸಾರವಾಗಿ ಜೀವಿಸುವವನು ತನ್ನ ವೈರಿಗಳೊಡನೆಯೂ ಸಮಾಧಾನದಿಂದಿರುವನು.


ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.


ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).


ಆದರೆ ಯಾಕೋಬನು, “ನಿನ್ನ ಚೊಚ್ಚಲತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು.


ಇಂದಿಗೂ ಸಹ ಅವರು ಪೂರ್ವಕಾಲದಲ್ಲಿ ಮಾಡುತ್ತಿದ್ದಂತೆಯೇ ಜೀವಿಸುತ್ತಿದ್ದಾರೆ. ಅವರಿಗೆ ಯೆಹೋವನಲ್ಲಿ ಭಕ್ತಿಯಿಲ್ಲ. ಅವರು ಇಸ್ರೇಲರ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗುವುದಿಲ್ಲ. ಯೆಹೋವನು ಯಾಕೋಬನ ಸಂತತಿಗೆ ನೀಡಿದ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸುವುದಿಲ್ಲ.


ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು.


ನಂತರ ಸೌಲನು ದಾವೀದನಿಗೆ, “ದೇವರು ನಿನ್ನನ್ನು ಆಶೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ” ಎಂದನು. ದಾವೀದನು ತನ್ನ ಮಾರ್ಗದಲ್ಲಿ ಹೊರಟುಹೋದನು. ಸೌಲನು ಮನೆಗೆ ಹಿಂದಿರುಗಿದನು.


ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು.


ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.


ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.)


ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.


ದೇವರನ್ನು ಆರಾಧಿಸುವುದಕ್ಕಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿ ಆ ಸ್ಥಳಕ್ಕೆ “ಇಸ್ರೇಲರ ದೇವರಾದ ಏಲೆಲೋಹೇ” ಎಂದು ಹೆಸರಿಟ್ಟನು.


ಆ ಪುರುಷನು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅದಕ್ಕೆ ಯಾಕೋಬನು, “ನನ್ನ ಹೆಸರು ಯಾಕೋಬ” ಅಂದನು.


ಅಬ್ರಹಾಮನು ಇಸಾಕನ ತಂದೆ. ಇಸಾಕನ ಗಂಡುಮಕ್ಕಳು ಯಾರೆಂದರೆ: ಏಸಾವ ಮತ್ತು ಇಸ್ರೇಲ್.


ಯಾಕೋಬೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಇಸ್ರೇಲೇ, ಯೆಹೋವನು ನಿನ್ನನ್ನು ನಿರ್ಮಿಸಿದನು. ಈಗ ಆತನು ಹೇಳುವುದೇನೆಂದರೆ: “ಭಯಪಡಬೇಡ. ನಾನೇ ನಿನ್ನನ್ನು ರಕ್ಷಿಸಿದ್ದೇನೆ. ನಾನು ನಿನಗೆ ಹೆಸರಿಟ್ಟೆನು. ನೀನು ನನ್ನವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು