Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:30 - ಪರಿಶುದ್ದ ಬೈಬಲ್‌

30 ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:30
28 ತಿಳಿವುಗಳ ಹೋಲಿಕೆ  

ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.


ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು.


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


‘ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು.


ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.


ಅವನು ಈಜಿಪ್ಟನ್ನು ಬಿಟ್ಟುಹೋದದ್ದು ನಂಬಿಕೆಯಿಂದಲೇ. ಫರೋಹನ ಸಿಟ್ಟಿಗೆ ಅವನು ಭಯಪಡಲಿಲ್ಲ. ಯಾರಿಗೂ ಕಾಣದ ದೇವರು ತನಗೆ ಕಾಣುತ್ತಿರುವನೋ ಎಂಬಂತೆ ಅವನು ದೃಢಚಿತ್ತನಾಗಿದ್ದನು;


ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು.


ದೇವರನ್ನು ನೋಡಲು ಯಾವ ವ್ಯಕ್ತಿಗೂ ಸಾಧ್ಯವಿಲ್ಲ. ಆದರೆ ಯೇಸುವು ದೇವರ ಪ್ರತಿರೂಪಿಯಾಗಿದ್ದಾನೆ. ಸೃಷ್ಟಿಸಲ್ಪಟ್ಟವುಗಳಿಗೆಲ್ಲಾ ಯೇಸು ಅಧಿಪತಿಯಾಗಿದ್ದಾನೆ.


ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.


“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.


ನಮ್ಮ ಮುಖಗಳು ಮುಸುಕಿನಿಂದ ಮುಚ್ಚಲ್ಪಟ್ಟಿಲ್ಲ. ನಾವೆಲ್ಲರೂ ಮುಸುಕು ತೆರೆದ ಮುಖವುಳ್ಳವರಾಗಿದ್ದು ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತಿದ್ದೇವೆ. ಪ್ರಭುವಿನಿಂದ ಹೊರಹೊಮ್ಮುವ ಮಹಿಮೆಯು ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಆತನನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮನಾಗಿರುವ ಪ್ರಭುವಿನ ಕಾರ್ಯವೇ.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.


ಗಿದ್ಯೋನನು ಪೆನೂವೇಲಿನ ಬುರುಜನ್ನೂ ಸಹ ಕೆಡವಿ ಆ ಪಟ್ಟಣದ ಜನರನ್ನು ಕೊಂದುಹಾಕಿದನು.


ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು.


ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.


ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.


ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.


ಯಾಕೋಬನು ಪದ್ದನ್‌ಅರಾಮಿನಿಂದ ಹಿಂತಿರುಗಿ ಬಂದಾಗ, ದೇವರು ಅವನಿಗೆ ಮತ್ತೆ ಕಾಣಿಸಿಕೊಂಡು ಅವನನ್ನು ಆಶೀರ್ವದಿಸಿದನು.


ಆದ್ದರಿಂದ ಮಾನೋಹನು ಯೆಹೋವನ ದೂತನಿಗೆ, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ. ನಿನ್ನ ಹೆಸರೇನು?” ಎಂದು ಕೇಳಿದನು.


ಯೆಹೋವನ ದೂತನು, “ನೀನು ನನ್ನ ಹೆಸರನ್ನು ಏಕೆ ಕೇಳುವೆ? ಅದು ನೀನು ನಂಬಲಾರದಷ್ಟು ಆಶ್ಚರ್ಯಕರವಾದದ್ದು” ಅಂದನು.


ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು