Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:32 - ಪರಿಶುದ್ದ ಬೈಬಲ್‌

32 ಈ ಮಾಂಸಖಂಡದಲ್ಲಿ ಯಾಕೋಬನಿಗೆ ನೋವು ಉಂಟಾಗಿದ್ದರಿಂದ ಇಂದಿಗೂ ಇಸ್ರೇಲರು ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ಪುರುಷನು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರೆಯೇಲರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಮಾಂಸವನ್ನು ತಿನ್ನುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:32
6 ತಿಳಿವುಗಳ ಹೋಲಿಕೆ  

ಆದಕಾರಣವೇ ಇಂದಿಗೂ ಸಹ ಅಷ್ಡೋದಿನಲ್ಲಿ ದಾಗೋನನ ಗುಡಿಯನ್ನು ಪ್ರವೇಶಿಸುವ ಯಾಜಕರಾಗಲಿ ಇಲ್ಲವೆ ಇತರೆ ಜನರಾಗಲಿ ಹೊಸ್ತಿಲನ್ನು ತುಳಿಯುವುದಿಲ್ಲ.


ಯಾಕೋಬನನ್ನು ಸೋಲಿಸಲು ತನಗೆ ಸಾಧ್ಯವಾಗದಿರುವುದನ್ನು ಗಮನಿಸಿದ ಆ ಪುರುಷನು ಯಾಕೋಬನ ತೊಡೆಯನ್ನು ಮುಟ್ಟಿದನು. ಆಗ ಯಾಕೋಬನ ಕೀಲು ತಪ್ಪಿತು.


ಆಮೇಲೆ ಅವನು ಪೆನೀಯೇಲ್‌ನಿಂದ ಹೊರಟುಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು.


ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು.


ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು