Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 32:9 - ಪರಿಶುದ್ದ ಬೈಬಲ್‌

9 ಯಾಕೋಬನು, “ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರಾಗಿರುವ ಯೆಹೋವನೇ, ನನ್ನ ದೇಶಕ್ಕೆ ಮತ್ತು ನನ್ನ ಕುಟುಂಬಕ್ಕೆ ಹಿಂತಿರುಗಿ ಬರುವಂತೆ ನೀನು ಹೇಳಿದೆ. ನೀನು ನನಗೆ ಒಳ್ಳೆಯದನ್ನು ಮಾಡುವುದಾಗಿ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 32:9
20 ತಿಳಿವುಗಳ ಹೋಲಿಕೆ  

ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.


ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.


ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.


ಯೆಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ತಮಗೆ ಬಂದೊದಗಿದ ಸಮಸ್ಯೆಗಾಗಿ ಪರಲೋಕದ ಕಡೆಗೆ ನೋಡಿ ಗಟ್ಟಿಯಾಗಿ ಪ್ರಾರ್ಥಿಸಿದರು.


“ನಮ್ಮ ಪಿತೃಗಳ ದೇವರಾದ ಯೆಹೋವನೇ, ನೀನು ಪರಲೋಕದಲ್ಲಿರುವ ದೇವರು. ಲೋಕದ ಎಲ್ಲಾ ದೇಶಗಳನ್ನಾಳುವವನು ನೀನೇ. ಬಲಸಾಮರ್ಥ್ಯವುಳ್ಳವನು ನೀನೇ, ಯಾರೂ ನಿನಗೆದುರಾಗಿ ನಿಲ್ಲಲಾರರು.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ನಾನು ನಿನ್ನ ಪೂರ್ವಿಕರ ದೇವರು, ನಾನು ಅಬ್ರಹಾಮನ ದೇವರು, ನಾನು ಇಸಾಕನ ದೇವರು, ನಾನು ಯಾಕೋಬನ ದೇವರು” ಎಂದು ಹೇಳಿದನು. ದೇವರನ್ನು ನೋಡುವುದಕ್ಕೆ ಭಯಪಟ್ಟು ಮೋಶೆ ತನ್ನ ಮುಖವನ್ನು ಮುಚ್ಚಿಕೊಂಡನು.


ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.


“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.


“ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.


ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ಕೆಳಗಿನ ಆಳವಾದ ಸಾಗರದ ಸೆಲೆಗಳಿಂದಲೂ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ನಿನಗೆ ಸ್ತನ್ಯಗಳಿಂದಲೂ ಗರ್ಭದಿಂದಲೂ ಆಶೀರ್ವಾದಗಳನ್ನು ಕೊಡಲಿ.


ನೇರೀಯನ ಮಗನಾದ ಬಾರೂಕನಿಗೆ ಕ್ರಯಪತ್ರವನ್ನು ಕೊಟ್ಟ ಮೇಲೆ ನಾನು ಯೆಹೋವನಿಗೆ ಪ್ರಾರ್ಥಿಸಿ ಹೀಗೆಂದೆನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು