Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:10 - ಪರಿಶುದ್ದ ಬೈಬಲ್‌

10 ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:10
19 ತಿಳಿವುಗಳ ಹೋಲಿಕೆ  

ಆಗ ಅವನು ದೇವರಿಗೆ ಪ್ರಾರ್ಥಿಸಲು ಆತನು ಅವನ ಪ್ರಾರ್ಥನೆಗೆ ಉತ್ತರಕೊಡುವನು. ಅವನು ಆನಂದ ಧ್ವನಿಗೈದು ದೇವರನ್ನು ಆರಾಧಿಸುವನು; ಆತನ ಮುಂದೆ ನೀತಿವಂತನಾಗಿ ಜೀವಿಸುವನು.


ಅವರು ಆತನ ಮುಖವನ್ನು ನೋಡುತ್ತಾರೆ. ದೇವರ ಹೆಸರನ್ನು ಅವರ ಹಣೆಗಳ ಮೇಲೆ ಬರೆಯಲಾಗುತ್ತದೆ.


ಯೆಹೋವನು ಹೀಗೆನ್ನುತ್ತಾನೆ: “ಶತ್ರುವಿನ ಖಡ್ಗಕ್ಕೆ ಕೆಲವು ಜನರು ಆಹುತಿಯಾಗಿಲ್ಲ. ಅವರಿಗೆ ಮರುಭೂಮಿಯಲ್ಲಿ ನೆಮ್ಮದಿ ದೊರೆಯುವುದು. ಇಸ್ರೇಲು ವಿಶ್ರಾಂತಿಯನ್ನು ಬಯಸಿ ಬರುವುದು.”


ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು.


ಅಬ್ಷಾಲೋಮನು ಯೋವಾಬನಿಗೆ, “ನಾನು ನಿನಗೆ ಸಂದೇಶವನ್ನು ಕಳುಹಿಸಿ ಇಲ್ಲಿಗೆ ಬರಲು ಹೇಳಿ ಕಳುಹಿಸಿದ್ದೆನು. ರಾಜನ ಬಳಿಗೆ ನಿನ್ನನ್ನು ಕಳುಹಿಸಲು ನಾನು ಅಪೇಕ್ಷಿಸಿದೆನು. ಗೆಷೂರಿನಿಂದ ನನ್ನನ್ನು ಮನೆಗೆ ಕರೆಸಲು ಅವನು ಇಚ್ಛಿಸಿದ್ದು ಏಕೆ ಎಂಬುದನ್ನು ನೀನು ಕೇಳಬೇಕೆಂದು ನಾನು ಅಪೇಕ್ಷಿಸಿದೆನು. ನಾನು ಅವನನ್ನು ನೋಡಲಾಗದಿದ್ದರೆ ಗೆಷೂರಿನಲ್ಲಿ ವಾಸಿಸುವುದೇ ನನಗೆ ಚೆನ್ನಾಗಿರುತ್ತಿತ್ತು. ಈಗ ರಾಜನನ್ನು ನೋಡಲು ನನಗೆ ಅವಕಾಶವನ್ನು ಕೊಡು. ನಾನು ಪಾಪವನ್ನು ಮಾಡಿದ್ದರೆ ಅವನು ನನ್ನನ್ನು ಕೊಂದುಬಿಡಲಿ!” ಎಂದನು.


ಅಬ್ಷಾಲೋಮನು ಎರಡು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ.


ಆದರೆ ರಾಜನಾದ ದಾವೀದನು, “ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿ ಹೋಗಲಿ. ಅವನು ನನ್ನನ್ನು ನೋಡಲು ಬರುವುದು ಬೇಡ” ಎಂದನು. ಆದ್ದರಿಂದ ಅಬ್ಷಾಲೋಮನು ತನ್ನ ಸ್ವಂತ ಮನೆಗೆ ಹಿಂದಿರುಗಿಹೋದನು. ಅಬ್ಷಾಲೋಮನು ರಾಜನನ್ನು ನೋಡಲು ಹೋಗಲಿಲ್ಲ.


ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.


ಆದರೆ ದಾವೀದನು, “ನಾನು ನಿನ್ನ ಗೆಳೆಯನೆಂಬುದು ನಿನ್ನ ತಂದೆಗೆ ಚೆನ್ನಾಗಿ ತಿಳಿದಿದೆ. ನಿನ್ನ ತಂದೆಯು, ‘ಯೋನಾತಾನನಿಗೆ ಇದು ತಿಳಿಯಲೇಬಾರದು. ಅವನಿಗೆ ತಿಳಿದುಬಿಟ್ಟರೆ ಅವನು ತನ್ನ ಹೃದಯದಲ್ಲಿ ದುಃಖಪಟ್ಟು ದಾವೀದನಿಗೆ ಹೇಳಿಬಿಡುತ್ತಾನೆ’ ಎಂದುಕೊಂಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ, ನಾನು ಸಾವಿಗೆ ಬಹು ಹತ್ತಿರವಾಗಿದ್ದೇನೆ” ಎಂದು ಹೇಳಿದನು.


ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.


ಎಪ್ಪತ್ತು ದಿನಗಳಾದ ಮೇಲೆ ಯೋಸೇಫನು ಫರೋಹನ ಅಧಿಕಾರಿಗಳಿಗೆ, “ದಯವಿಟ್ಟು ಇದನ್ನು ಫರೋಹನಿಗೆ ತಿಳಿಸಿರಿ.


ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.


ನಿಮ್ಮ ಸೇವಕನಾದ ನನಗೆ ಮಹಾಕರುಣೆಯನ್ನು ತೋರಿ ನನ್ನನ್ನು ಕಾಪಾಡಿದ್ದೀರಿ. ಆದರೆ ನಾನು ಬೆಟ್ಟಗಳವರೆಗೂ ಓಡಿಹೋಗಲಾರೆ. ನಾನು ನಿಧಾನವಾಗಿ ಹೋಗುವುದಾದರೆ ಕೇಡು ಸಂಭವಿಸಿ ಕೊಲ್ಲಲ್ಪಡುವೆನು.


“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ.


ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.


ಆದರೆ ಏಸಾವನು, “ತಮ್ಮನೇ, ನೀನು ನನಗೆ ಉಡುಗೊರೆಗಳನ್ನು ಕೊಡಬೇಕಾಗಿಲ್ಲ, ನನಗೆ ಬೇಕಾದಷ್ಟಿದೆ” ಎಂದು ಹೇಳಿದನು.


ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು